ಮೇಘಾಲಯ ಸಿಎಂ ಆಗಿ ಎರಡನೇ ಬಾರಿ ಎನ್ ಪಿಪಿ ನಾಯಕ ಸಂಗ್ಮಾ ಕಾನ್ರಾಡ್ ಅಧಿಕಾರ ಸ್ವೀಕಾರ, ಸಂಪುಟ ಸದಸ್ಯರ ಪ್ರಮಾಣವಚನ

ಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಕೆ ಸಂಗ್ಮಾ ಮಂಗಳವಾರ ಸತತ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು.
ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಸಂಗ್ಮಾ ಕಾನ್ರಾಡ್
ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಸಂಗ್ಮಾ ಕಾನ್ರಾಡ್
Updated on

ಗುವಾಹಟಿ: ಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಕೆ ಸಂಗ್ಮಾ ಮಂಗಳವಾರ ಸತತ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಶಿಲ್ಲಾಂಗ್‌ನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (NPP) ಪ್ರೆಸ್ಟೋನ್ ಟೈನ್‌ಸಾಂಗ್ ಅವರು ಉಪಮುಖ್ಯಮಂತ್ರಿಯಾಗಿ ಮತ್ತು ಕೆಲವರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಎರಡನೇ ಬಾರಿ ಮುಖ್ಯಮಂತ್ರಿ: ಸಂಗ್ಮಾ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ಚುನಾವಣೆಯಲ್ಲಿ ರಾಜ್ಯದ 60 ಸ್ಥಾನಗಳಲ್ಲಿ 26 ಸ್ಥಾನಗಳನ್ನು ಪಡೆಯುವ ಮೂಲಕ ಎನ್‌ಪಿಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಸಂಗ್ಮಾ ಅವರೊಂದಿಗೆ 45 ಶಾಸಕರಿದ್ದಾರೆ ಮತ್ತು ಅವರು ಬಿಜೆಪಿ ಮತ್ತು ಕೆಲವು ಪ್ರಾದೇಶಿಕ ಪಕ್ಷಗಳನ್ನು ಘಟಕಗಳಾಗಿ ಹೊಂದಿರುವ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಲಿದ್ದಾರೆ.

ಶಿಲ್ಲಾಂಗ್‌ನಲ್ಲಿ ಕಾರ್ಯಕ್ರಮ ಮುಗಿದ ನಂತರ, ಮೋದಿ, ಶಾ, ನಡ್ಡಾ ಮತ್ತು ಶರ್ಮಾ ಅವರು ಪ್ರಮಾಣ ವಚನ ಸಮಾರಂಭಕ್ಕಾಗಿ ನಾಗಾಲ್ಯಾಂಡ್‌ಗೆ ತೆರಳುತ್ತಾರೆ. ಅಲ್ಲಿ ನಾಗಾಲ್ಯಾಂಡ್ ನ ನೇಫಿಯು ರಿಯೊ ಐದನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಜೆಪಿಯು ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಯ ಮಿತ್ರ ಪಕ್ಷವಾಗಿದ್ದು, ಸೀಟು ಹಂಚಿಕೆ ಒಪ್ಪಂದವನ್ನು ಚುನಾವಣೆಗೆ ಮುನ್ನ ಮಾಡಿಕೊಂಡಿದ್ದರು. NDPP 25 ಸ್ಥಾನಗಳನ್ನು ಮತ್ತು ಬಿಜೆಪಿ 12 ಸ್ಥಾನಗಳನ್ನು ಗೆದ್ದಿದೆ. 

ಇಬ್ಬರು ಉಪ ಮುಖ್ಯಮಂತ್ರಿಗಳಾದ ಪ್ರೆಸ್ಟೋನ್ ಟೈನ್‌ಸಾಂಗ್ ಹೊರತುಪಡಿಸಿ, ಎನ್‌ಪಿಪಿಯ ಸ್ನಿಯಾವ್‌ಭಾಲಾಂಗ್ ಧಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com