ಕಾಂಗ್ರೆಸ್ ಅಹಂಕಾರ ತೊರೆಯಬೇಕು ಎಂದ ಕವಿತಾ; ಇಡಿ ತನಿಖೆ ಬಗ್ಗೆ ನೋಡಿಕೊಳ್ಳಿ ಎಂದು ಜೈರಾಮ್ ರಮೇಶ್ ತಿರುಗೇಟು

ಕಾಂಗ್ರೆಸ್ ಪಕ್ಷ ಇಂದು ಪ್ರಾದೇಶಿಕ ಪಕ್ಷವಾಗಿದೆ ಎಂದು ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ.ಕವಿತಾ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಪಕ್ಷದ ನಾಯಕರು ದುರಹಂಕಾರವನ್ನು ತೊರೆದು ವಾಸ್ತವವನ್ನು ಅರಿತು ಎದುರಿಸಬೇಕಾಗಿದೆ ಎಂದು ಹೇಳಿದ್ದು ಪ್ರತಿಪಕ್ಷಗಳ ಮಧ್ಯೆ ಭಿನ್ನಾಭಿಪ್ರಾಯಗಳಿವೆ ಎಂಬುದನ್ನು ಎತ್ತಿ ತೋರಿಸುತ್ತದೆ. 
ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ (ಎಲ್) ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್
ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ (ಎಲ್) ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್

ನವದೆಹಲಿ: ಕಾಂಗ್ರೆಸ್ ಪಕ್ಷ ಇಂದು ಪ್ರಾದೇಶಿಕ ಪಕ್ಷವಾಗಿದೆ ಎಂದು ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ.ಕವಿತಾ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಪಕ್ಷದ ನಾಯಕರು ದುರಹಂಕಾರವನ್ನು ತೊರೆದು ವಾಸ್ತವವನ್ನು ಅರಿತು ಎದುರಿಸಬೇಕಾಗಿದೆ ಎಂದು ಹೇಳಿದ್ದು ಪ್ರತಿಪಕ್ಷಗಳ ಮಧ್ಯೆ ಭಿನ್ನಾಭಿಪ್ರಾಯಗಳಿವೆ ಎಂಬುದನ್ನು ಎತ್ತಿ ತೋರಿಸುತ್ತದೆ. 

ಇದಕ್ಕೆ ಪ್ರತ್ಯುತ್ತರ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಕಾಂಗ್ರೆಸ್ ಬಗ್ಗೆ ಚಿಂತೆ ಮಾಡುವ ಬದಲು ನೀವು ಸದ್ಯಕ್ಕೆ ಜಾರಿ ನಿರ್ದೇಶನಾಲಯ ಮತ್ತು ಜೈಲಿನ ಬಗ್ಗೆ ಚಿಂತಿಸುವಂತೆ ಚಿಂತಿಸಿ ಎಂದಿದ್ದಾರೆ. "ಕವಿತಾ ಇಡಿ ದಾಳಿ ಮತ್ತು ಜೈಲಿನ ಬಗ್ಗೆ ಚಿಂತಿಸಬೇಕು" ಎಂದು ರಮೇಶ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು, ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ನಾಳೆ ಫೆಡರಲ್ ತನಿಖಾ ಸಂಸ್ಥೆ ಇಡಿಯ ಮುಂದೆ ವಿಚಾರಣೆಗೆ ಕವಿತಾ ಹಾಜರಾಗಲಿದ್ದಾರೆ. 

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಇಂದು ನಡೆಸಲಿರುವ ಪ್ರತಿಭಟನೆಗೆ ಪಕ್ಷದ ಪ್ರತಿನಿಧಿಗಳನ್ನು ಕಳುಹಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ಒತ್ತಾಯಿಸಿದ್ದಾರೆ. ಇಂದು ಪ್ರತಿಭಟನೆಯಲ್ಲಿ 6,000 ಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದ್ದರೆ, 18 ರಾಜಕೀಯ ಪಕ್ಷಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿವೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ ‘ವಾಸ್ತವ ಸತ್ಯವನ್ನು ಅರ್ಥಮಾಡಿಕೊಳ್ಳಬೇಕು' ಮತ್ತು ಪ್ರಬಲ ಪ್ರಾದೇಶಿಕ ಪಕ್ಷಗಳೊಂದಿಗೆ ಕೈಜೋಡಿಸಬೇಕು. ಕಾಂಗ್ರೆಸ್ ಇನ್ನು ಮುಂದೆ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ, ಅದು ಪ್ರಾದೇಶಿಕ ಪಕ್ಷವಾಗಿ ಪರಿವರ್ತನೆಯಾಗಿದೆ, ತನ್ನ ಅಹಂಕಾರವನ್ನು ತೊಡೆದುಹಾಕಬೇಕು ಎಂದು ಕವಿತಾ ಹೇಳಿದ್ದಾರೆ. 

2010ರಲ್ಲಿ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿದ್ದಕ್ಕಾಗಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಕವಿತಾ ಶ್ಲಾಘಿಸಿದ್ದಾರೆ. "ಅಂದು ಸಮ್ಮಿಶ್ರ ಸರ್ಕಾರವಿದ್ದರೂ ಸೋನಿಯಾ ಗಾಂಧಿಯವರು ರಾಜ್ಯಸಭೆಗೆ ಮಸೂದೆಯನ್ನು ತೆಗೆದುಕೊಂಡು ಹೋದರು ಎಂದು ಕವಿತಾ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com