ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನಾಪತ್ತೆಯಾಗಿದ್ದ ಹದಿಹರೆಯದ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಅತ್ಯಾಚಾರ, ಕೊಲೆ ಆರೋಪ

ಉತ್ತರ ಪ್ರದೇಶದ ತಿರ್ವಾದಲ್ಲಿ  ನಾಪತ್ತೆಯಾಗಿದ್ದ 14 ವರ್ಷದ ಹದಿಹರೆಯದ ಬಾಲಕಿ ತನ್ನ ಊರ ಹೊರಗಡೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Published on

ಲಖನೌ: ಉತ್ತರ ಪ್ರದೇಶದ ತಿರ್ವಾದಲ್ಲಿ  ನಾಪತ್ತೆಯಾಗಿದ್ದ 14 ವರ್ಷದ ಹದಿಹರೆಯದ ಬಾಲಕಿ ತನ್ನ ಊರ ಹೊರಗಡೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಹೋಳಿ ಹಬ್ಬವಾದ ಬುಧವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಬಾಲಕಿ ಕುರಿತು ಆಕೆಯ ತಂದೆ ತಿರ್ವಾದಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.ಗುರುವಾರ ಮಧ್ಯಾಹ್ನ ಹದಿಹರೆಯದ ಬಾಲಕಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಮರದಿಂದ ಕೆಳಗೆ ಇಳಿಸಿ, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಾನುವಾರುಗಳಿಗೆ ಮೇವು ತರಲು ಹೋದ ಬಾಲಕಿಯನ್ನು ಅಪಹರಿಸಿ, ಬಳಿಕ ಕೊಲೆ ಮಾಡಲಾಗಿದೆ. ಆತ್ಮಹತ್ಯೆ ಎಂದು ಬಿಂಬಿಸಲು ಮರಕ್ಕೆ ದುಪ್ಪಟದಿಂದ ನೇಣು ಬಿಗಿದ ರೀತಿಯಲ್ಲಿ ಆಕೆಯನ್ನು ಹಾಕಲಾಗಿದೆ ಎಂದು ಮೃತ ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.  

ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು, ಕುಟುಂಬಸ್ಥರ ಆರೋಪ ಬಗ್ಗೆಯೂ ತನಿಖೆ ನಡೆಸಲಾಗುತ್ತಿದ್ದು, ಶಂಕಿತ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ  ಎಂದು ಪೊಲೀಸ್ ಅಧಿಕಾರಿ ಮಹೇಶ್ ವೀರ್ ಸಿಂಗ್ ತಿಳಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com