ಸ್ವಾತಿ ಮಲಿವಾಲ್
ಸ್ವಾತಿ ಮಲಿವಾಲ್

ಚಿಕ್ಕವಳಿದ್ದಾಗ ತಂದೆಯಿಂದ ನನ್ನ ಮೇಲೆ ಲೈಂಗಿಕ ದೌರ್ಜನ್ಯ: ಸ್ವಾತಿ ಮಲಿವಾಲ್

ನಾನೂ ಸಹ ಬಾಲ್ಯದಲ್ಲಿ ನನ್ನ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದೇನೆ ಎಂದು ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಶನಿವಾರ ಹೇಳಿದ್ದಾರೆ.

ನವದೆಹಲಿ: ನಾನೂ ಸಹ ಬಾಲ್ಯದಲ್ಲಿ ನನ್ನ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದೇನೆ ಎಂದು ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಶನಿವಾರ ಹೇಳಿದ್ದಾರೆ.

ಇಂದು ನಡೆದ ಡಿಸಿಡಬ್ಲ್ಯು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಲಿವಾಲ್, ನಾನು 4ನೇ ತರಗತಿಯವರೆಗೂ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೇನೆ. ಈ ಆಘಾತ ನಾನು ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಲು ಕಾರಣವಾಯಿತು ಎಂದು ತಿಳಿಸಿದ್ದಾರೆ.

"ನಾನು ಚಿಕ್ಕವಳಿದ್ದಾಗ ನನ್ನ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದೆ. ಆಗ ನಾನು ತುಂಬಾ ಚಿಕ್ಕವಳಾಗಿದ್ದೆ. ನನ್ನ ತಂದೆ ನನ್ನನ್ನು ಥಳಿಸುತ್ತಿದ್ದರು ಮತ್ತು ನನ್ನನ್ನು ನಾನು ರಕ್ಷಿಸಿಕೊಳ್ಳು ಹಾಸಿಗೆಯ ಕೆಳಗೆ ಅಡಗಿಕೊಳ್ಳುತ್ತಿದ್ದೆ" ಎಂದು ಹೇಳಿದ್ದಾರೆ.

ಹಾಸಿಗೆಯ ಕೆಳಗೆ ಬಚ್ಚಿಟ್ಟುಕೊಂಡು, ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸುವ ಇಂತಹ ಪುರುಷರಿಗೆ ಹೇಗೆ ಪಾಠ ಕಲಿಸಬೇಕು ಮತ್ತು ಮಹಿಳೆಯರ ಹಕ್ಕುಗಳನ್ನು ರಕ್ಷಿಸಲು ನಾನು ಹೇಗೆ ಸಹಾಯ ಮಾಡಬಹುದು ಎಂದು ಯೋಚಿಸುತ್ತಿದ್ದೆ ಎಂದಿದ್ದಾರೆ.

ಇತ್ತೀಚೆಗಷ್ಟೆ, ನಟಿ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ(ಎನ್‌ಸಿಡಬ್ಲ್ಯೂ) ಸದಸ್ಯೆ ಖುಷ್ಬು ಸುಂದರ್ ಅವರು ಸಹ ತಾವು 8ನೇ ವಯಸ್ಸಿನಲ್ಲಿದ್ದಾಗ ತಮ್ಮ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದಾಗಿ ಹೇಳಿದ್ದರು.

Related Stories

No stories found.

Advertisement

X
Kannada Prabha
www.kannadaprabha.com