ವೈದ್ಯಕೀಯ ತುರ್ತು ಪರಿಸ್ಥಿತಿ: ದೆಹಲಿ-ದೋಹಾ ವಿಮಾನ ಕರಾಚಿಯಲ್ಲಿ ಭೂಸ್ಪರ್ಶ, ಆದರೂ ಉಳಿಯಲಿಲ್ಲ ಪ್ರಯಾಣಿಕನ ಪ್ರಾಣ!

ದೆಹಲಿಯಿಂದ ದೋಹಾಗೆ ತೆರಳುತ್ತಿದ್ದ ಇಂಡಿಗೋ ವಿಮಾನ ವೈದ್ಯಕೀಯ ತುರ್ತು ಪರಿಸ್ಥಿತಿ ಹಿನ್ನಲೆಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.
ಇಂಡಿಗೋ ವಿಮಾನ
ಇಂಡಿಗೋ ವಿಮಾನ
Updated on

ನವದೆಹಲಿ: ದೆಹಲಿಯಿಂದ ದೋಹಾಗೆ ತೆರಳುತ್ತಿದ್ದ ಇಂಡಿಗೋ ವಿಮಾನ ವೈದ್ಯಕೀಯ ತುರ್ತು ಪರಿಸ್ಥಿತಿ ಹಿನ್ನಲೆಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.

ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ದೆಹಲಿಯಿಂದ ದೋಹಾಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು,  ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ಸೇವೆ ನೀಡಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಪ್ರಯಾಣಿಕ ಸಾವನ್ನಪ್ಪಿದ್ದ ಎಂದು ವೈದ್ಯಕೀಯ ತಂಡ ಸ್ಪಷ್ಟಪಡಿಸಿದೆ. ಪ್ರಯಾಣಿಕ ನೈಜೀರಿಯಾದ ಪ್ರಜೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಇಂಡಿಗೋ ಏರ್‌ಲೈನ್ ಹೇಳಿಕೆ ಬಿಡುಗಡೆ ಮಾಡಿದ್ದು, 'ಈ ಸುದ್ದಿಯಿಂದ ನಮಗೆ ಅತೀವ ದುಃಖವಾಗಿದೆ ಎಂದು ಹೇಳಿದೆ. ನಮ್ಮ ಪ್ರಾರ್ಥನೆಗಳು ಮತ್ತು ಸಂತಾಪಗಳು ಸಂತ್ರಸ್ತರ ಕುಟುಂಬದೊಂದಿಗೆ ಇವೆ. ಪ್ರಸ್ತುತ, ನಾವು ವಿಮಾನದ ಇತರ ಪ್ರಯಾಣಿಕರನ್ನು ಗಮ್ಯಸ್ಥಾನಕ್ಕೆ ಕರೆದೊಯ್ಯಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com