'ಲೋಕಮತ್ ಸಂಸದೀಯ ಪ್ರಶಸ್ತಿ: ಅತ್ಯುತ್ತಮ ಸಂಸದ ಪ್ರಶಸ್ತಿಗೆ ತೇಜಸ್ವಿ ಸೂರ್ಯ ಆಯ್ಕೆ

ಪ್ರಥಮ ಬಾರಿಗೆ ಸಂಸದರಾಗಿ ಗಣನೀಯ ಸೇವೆ ಸಲ್ಲಿಸುವ ಅತ್ಯುತ್ತಮ ಸಂಸದರಿಗೆ ನೀಡಲಾಗುವ ಪ್ರಶಸ್ತಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಭಾಜನರಾಗಿದ್ದಾರೆ.
ಸಂಸದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ
Updated on

ನವದೆಹಲಿ: ಪ್ರಥಮ ಬಾರಿಗೆ ಸಂಸದರಾಗಿ ಗಣನೀಯ ಸೇವೆ ಸಲ್ಲಿಸುವ ಅತ್ಯುತ್ತಮ ಸಂಸದರಿಗೆ ನೀಡಲಾಗುವ ಪ್ರಶಸ್ತಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಭಾಜನರಾಗಿದ್ದಾರೆ.

ಚೊಚ್ಚಲ ಬಾರಿಗೆ ಆಯ್ಕೆಯಾಗಿ ಉತ್ತಮ ಸೇವೆ ಸಲ್ಲಿಸಿರುವ ಸಂಸದರಿಗೆ 'ಲೋಕಮತ್ ಸಂಸದೀಯ ಪ್ರಶಸ್ತಿ- 2022, (4ನೆ ಆವೃತ್ತಿ)ಯಲ್ಲಿ, ಅತ್ಯುತ್ತಮ ಸಂಸದ ( Best Debutant Parliamentarian) ಪ್ರಶಸ್ತಿ ನೀಡಲಾಗುತ್ತದೆ. ತೇಜಸ್ವಿ ಸೂರ್ಯ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪಡೆದಿದ್ದಾರೆ.

17 ನೇ ಲೋಕಸಭಾ ಅವಧಿಯ ಎರಡನೇ ಅತೀ ಕಿರಿಯ ಸಂಸದರಾಗಿ 28ರ ವಯಸ್ಸಿನಲ್ಲಿ ಸಂಸದರಾಗಿ ಆಯ್ಕೆಯಾಗಿರುವ ತೇಜಸ್ವೀ ಸೂರ್ಯ, ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿ ಸದಸ್ಯರೂ ಆಗಿದ್ದು, ಪ್ರಾದೇಶಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಅನೇಕ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿ ಗಮನ ಸೆಳೆದಿದ್ದಾರೆ. ದತ್ತಾಂಶ ಸುರಕ್ಷತೆ ಬಗ್ಗೆ, ವೈಯುಕ್ತಿಕ ದತ್ತಾಂಶ ಸುರಕ್ಷತೆ ಮಸೂದೆಯ ಜಂಟಿ ಸ್ಥಾಯಿ ಸಮಿತಿ ಸದಸ್ಯರಾಗಿ ನೀತಿ ನಿಯಮಾವಳಿಗಳ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

2019ರಿಂದ ಈ ವರೆಗೂ ರಾಷ್ಟ್ರೀಯ, ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದಂತೆ ಸಂಸತ್ತಿನ 26 ಚರ್ಚೆಗಳಲ್ಲಿ ತೇಜಸ್ವಿ ಸೂರ್ಯ ಧ್ವನಿ ಎತ್ತಿದ್ದು, ಎಲ್ಲ ಅಧಿವೇಶನಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡು ಸಂಸತ್ತಿನಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗಿದ್ದಾರೆ. 17ನೆ ಲೋಕಸಭೆಯಲ್ಲಿ ಎಲ್ಲ ವಲಯಗಳ ಮೇಲಿನ, ರಾಷ್ಟ್ರೀಯ & ಅಂತಾರಾಷ್ಟ್ರೀಯ ಹಿತಾಸಕ್ತಿಯ 308 ಪ್ರಶ್ನೆಗಳನ್ನು ಸಂಸತ್ತಿನಲ್ಲಿ ಕೇಳಿದ್ದು ( ಕೃಷಿ, ಶಿಕ್ಷಣ,ವಿಮಾನಯಾನ, ರೇಲ್ವೆ, ಐಟಿ, ಬಿಟಿ, ಅಂತರಿಕ್ಷ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ) ಈ ಕುರಿತು ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಹಿಂದಿನ ಆವೃತ್ತಿಗಳಲ್ಲಿ ಪ್ರಶಸ್ತಿ ಸ್ವೀಕರಿಸಿದವರಲ್ಲಿ ಡಾ. ಭಾರತಿ ಪ್ರವೀಣ್ ಪವಾರ್, ಮೀನಾಕ್ಷಿ ಲೇಖಿ ( ಉದಯೋನ್ಮುಖ ಮಹಿಳಾ ಸಂಸದೆ) ಹಾಗೂ ನಿಶಿಕಾಂತ್ ದುಬೇ ಪ್ರಮುಖರಾಗಿದ್ದಾರೆ. ಡೆರೆಕ್ ಓ ಬ್ರಿಯಾನ್ ಉತ್ತಮ ಸಂಸದ,  ಭರ್ತ್ರುಹರಿ ಮಹ್ತಾಬ್ ಜೀವಮಾನ ಸಾಧನೆ ಪ್ರಶಸ್ತಿ ಪಡೆದಿದ್ದು ವಿಶೇಷವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com