ನವದೆಹಲಿ: 2021 ರ ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ವಿಚಾರಣೆ ನಿಧಾನಗತಿಯಲ್ಲಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶೀಶ್ ಸಹ ಕಾನೂನು ಕ್ರಮ ಎದುರಿಸುತ್ತಿದ್ದಾರೆ.
ಪ್ರಕರಣದ ವಿಚಾರಣೆ ಸಂಬಂಧ ವಿಚಾರಣೆಯ ಬೆಳವಣಿಗೆಗಳ ಬಗ್ಗೆ ತಿಳಿಸಲು ಸಂಬಂಧಪಟ್ಟ ಸೆಷನ್ಸ್ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ವಿಚಾರಣೆಯ ಮೇಲ್ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನೋಡಿಕೊಳ್ಳುತ್ತಿಲ್ಲ ಆದರೆ ಪರೋಕ್ಷವಾಗಿ ನಿಗಾವಹಿಸುತ್ತಿರುವುದಾಗಿ ಸರ್ವೋಚ್ಛ ನ್ಯಾಯಾಲಯ ಹೇಳಿದೆ.
ನ್ಯಾ. ಸೂರ್ಯಕಾಂತ್ ಹಾಗೂ ಜೆಕೆ ಮಹೇಶ್ವರಿ ಅವರಿದ್ದ ಪೀಠ ಪ್ರಕರಣದಲ್ಲಿ ಆಶಿಶ್ ಮಿಶ್ರಾಗೆ ಎಂಟು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ ಜನವರಿ 25 ರ ತನ್ನ ಆದೇಶದ ಮಧ್ಯಂತರ ನಿರ್ದೇಶನ ಚಾಲ್ತಿಯಲ್ಲಿರಲಿದೆ ಎಂದೂ ಕೋರ್ಟ್ ಹೇಳಿದೆ.
ಸಂತ್ರಸ್ತರ ಕುಟುಂಬದ ಪರವಾಗಿ ವಾದ ಮಂಡಿಸುತ್ತಿರುವ ಅಡ್ವೊಕೇಟ್ ಪ್ರಶಾಂತ್ ಭೂಷಣ್, ಸುಮಾರು 200 ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ಪರೀಕ್ಷಿಸಬೇಕಾಗಿದೆ ಎಂದು ಹೇಳಿದ್ದು "ವಿಚಾರಣೆಯ ನಿಧಾನಗತಿಯ" ಕಳವಳ ವ್ಯಕ್ತವಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೋರ್ಟ್, ವಿಚಾರಣೆಯ ಪ್ರಕ್ರಿಯೆ ನಿಧಾನಗತಿಯಲ್ಲಿಲ್ಲ. ವಿಚಾರಣಾ ನ್ಯಾಯಾಧೀಶರಿಂದ ನಾವು ಮೂರು ಪತ್ರಗಳನ್ನು ಸ್ವೀಕರಿಸಿದ್ದೇವೆ, ಮೊದಲ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಖಿಂಪುರ ಖೇರಿ ಅವರಿಂದ ಸ್ವೀಕರಿಸಿದ ಪತ್ರಗಳ ವಿಷಯಗಳನ್ನು ಪರಿಶೀಲಿಸಲಾಗಿದೆ ಎಂದು ಕೋರ್ಟ್ ಹೇಳಿದೆ.
Advertisement