ನವದೆಹಲಿ: ಜನವರಿ 2024 ರ ಮೂರನೇ ವಾರದಲ್ಲಿ ಅಯೋಧ್ಯೆಯ ಮಂದಿರದಲ್ಲಿ ಭಗವಾನ್ ರಾಮ ಲಲ್ಲಾನ ವಿಗ್ರಹದ ಪ್ರತಿಷ್ಠಾಪನೆಯಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಖಜಾಂಚಿ ಸ್ವಾಮಿ ಗೋವಿಂದ್ ದೆವ್ ಗಿರಿ ಮಹಾರಾಜ್ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದ ದೊಂಬಿವಿಲ್ ಗೆ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಭಗವಾನ್ ರಾಮಚಂದ್ರನ ದೇವಾಲಯ ನಿರ್ಮಾಣ ಕಾಮಗಾರಿ ಕ್ಷಿಪ್ರಗತಿಯಲ್ಲಿ ನಡೆಯುತ್ತಿದೆ ಹಾಗೂ ಉತ್ತಮವಾಗಿ ನಡೆಯುತ್ತಿದೆ. ಈಗ ಶೇ.70 ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. 2024 ರ ಜನವರಿ ಮೂರನೇ ವಾರದ ವೇಳೆಗೆ ಅಯೋಧ್ಯೆಯಲ್ಲಿ ರಾಮ ಲಲ್ಲಾ ವಿಗ್ರಹ ಮೂಲ ಸ್ಥಾನದಲ್ಲಿ ಪ್ರತಿಷ್ಠಾಪನೆಯಾಗಲಿದೆ ಅಂದಿನಿಂದಲೇ ಭಕ್ತಾದಿಗಳಿಗೆ ದರ್ಶನ ಹಾಗೂ ಪ್ರಾರ್ಥನೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯ: ಅಯೋಧ್ಯೆ ಮಸೀದಿ ನಿರ್ಮಾಣಕ್ಕೆ ಕೊನೆಗೂ ಸಿಕ್ತು ಅನುಮೋದನೆ
ನಮ್ಮ ಟಾರ್ಗೆಟ್ ಇರುವುದು ಮೊದಲ ಮಹಡಿಯಲ್ಲಿರಲಿರುವ ಗರ್ಭಗುಡಿಯ ಕಾಮಗಾರಿ ಪೂರ್ಣಗೊಳಿಸಿ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸುವುದಾಗಿದೆ. ಆ ಬಳಿಕ ದೇವಾಲಯದ ಕರಕುಶಲತೆಯ ಕಾಮಗಾರಿಗಳು ಮುಂದುವರಿಯುತ್ತದೆ, ”ಎಂದು ಅವರು ಹೇಳಿದರು.
ಅಯೋಧ್ಯೆಯ ರಾಮಜನ್ಮಭೂಮಿ ವಿಚಾರದಲ್ಲಿ 2019 ರ ನವೆಂಬರ್ 9 ರಂದು ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿತ್ತು.
Advertisement