ಕುಸಿದು ಬಿದ್ದ ಕೋಲ್ಡ್ ಸ್ಟೋರೇಜ್; 20ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ
ಸಂಭಾಲ್: ಸಂಭಾಲ್ ಜಿಲ್ಲೆಯಲ್ಲಿ ಗುರುವಾರ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದಿದ್ದು, 20ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ವರದಿಗಳ ಪ್ರಕಾರ, ಈ ಘಟನೆಯು ಚಂದೌಸಿಯ ಮಾವಾಯಿ ಗ್ರಾಮದ ಕೋಲ್ಡ್ ಸ್ಟೋರೇಜ್‌ನಲ್ಲಿ ನಡೆದಿದೆ.
ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳೊಂದಿಗೆ ತಕ್ಷಣ ಸ್ಥಳಕ್ಕೆ ತಲುಪುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈಮಧ್ಯೆ, ಸ್ಥಳೀಯ ಜನರು ಈಗಾಗಲೇ ಗ್ರಾಮಕ್ಕೆ ತಲುಪಿದ್ದು, ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡುತ್ತಿದ್ದಾರೆ.
ಕಟ್ಟಡ ಕುಸಿತದ ನಂತರ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಒಳಗೆ ಬಂದು ಸೋರಿಕೆಯನ್ನು ತಡೆದಿದ್ದಾರೆ ಎಂದು ವರದಿಯಾಗಿದೆ.
ಏಳರಿಂದ ಎಂಟು ಜೆಸಿಬಿ ಯಂತ್ರಗಳು ಅವಶೇಷಗಳನ್ನು ತೆರವುಗೊಳಿಸಲು ಮತ್ತು ಅದರ ಅಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಕೆಲಸ ಮಾಡುತ್ತಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ