ಲಂಡನ್‌ನಲ್ಲಿ ಹೇಳಿಕೆ: ಸಭಾಪತಿ ಅವಕಾಶ ನೀಡಿದರೆ ಸಂಸತ್ತಿನಲ್ಲಿ ಮಾತನಾಡುತ್ತೇನೆ- ರಾಹುಲ್ ಗಾಂಧಿ

ವಿದೇಶದಿಂದ ವಾಪಸ್ಸಾದ ಬಳಿಕ ಗುರುವಾರ ಸಂಸತ್ ಭವನಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಲಂಡನ್ ಪ್ರವಾಸದ ವೇಳೆ ಭಾರತ ಅಥವಾ ಸಂಸತ್ತಿನ ವಿರುದ್ಧವಾಗಿ ನಾನು ಏನನ್ನೂ ಮಾತನಾಡಿಲ್ಲ ಎಂದು ಹೇಳಿದ್ದಾರೆ.
ಬಜೆಟ್ ಅಧಿವೇಶನದ ವೇಳೆ ಸಂಸತ್ ಭವನದ ಸಂಕೀರ್ಣದಲ್ಲಿ ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ.
ಬಜೆಟ್ ಅಧಿವೇಶನದ ವೇಳೆ ಸಂಸತ್ ಭವನದ ಸಂಕೀರ್ಣದಲ್ಲಿ ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ.

ನವದೆಹಲಿ: ವಿದೇಶದಿಂದ ವಾಪಸ್ಸಾದ ಬಳಿಕ ಗುರುವಾರ ಸಂಸತ್ ಭವನಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಲಂಡನ್ ಪ್ರವಾಸದ ವೇಳೆ ಭಾರತ ಅಥವಾ ಸಂಸತ್ತಿನ ವಿರುದ್ಧವಾಗಿ ನಾನು ಏನನ್ನೂ ಮಾತನಾಡಿಲ್ಲ ಎಂದು ಹೇಳಿದ್ದಾರೆ.
ಸಭಾಪತಿ ಅವಕಾಶ ನೀಡಿದರೆ ಸಂಸತ್ತಿನಲ್ಲಿ ಮಾತನಾಡುತ್ತೇನೆ ಎಂದು ಹೇಳಿದರು.

'ಅವರು ನನಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಿದರೆ, ನಂತರ ನನ್ನ ಅನಿಸಿಕೆಗಳನ್ನು ನಾನು ಹೇಳುತ್ತೇನೆ. ಸಂಸತ್ತಿನ ಒಳಗೆ ಮಾತನಾಡುವುದು ಬಿಜೆಪಿಗೆ ಇಷ್ಟವಾಗುವುದಿಲ್ಲ. ಅವಕಾಶ ನೀಡದಿದ್ದರೆ ಸಂಸತ್ತಿನ ಹೊರಗೆ ಮಾತನಾಡುವುದಾಗಿ' ಅವರು ಸಂಸತ್ತಿನಿಂದ ಹೊರಡುವಾಗ ಸುದ್ದಿಗಾರರಿಗೆ ತಿಳಿಸಿದರು.

ವಿದೇಶದಿಂದ ಹಿಂದಿರುಗಿದ ನಂತರ ಸಂಸತ್ ಭವನಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಲಂಡನ್‌ನಲ್ಲಿ ನೀಡಿರುವ ಹೇಳಿಕೆಗಳಿಗೆ ಕ್ಷಮೆಯಾಚಿಸುತ್ತೀರಾ ಎಂದು ಕೇಳಿದಾಗ ಮುಗುಳ್ನಕ್ಕರು.

ಇಂಗ್ಲೆಂಡ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಭಾರತೀಯ ಪ್ರಜಾಪ್ರಭುತ್ವದ ರಚನೆಗಳು ದಾಳಿಗೆ ಒಳಗಾಗುತ್ತಿವೆ ಮತ್ತು ದೇಶದ ಸಂಸ್ಥೆಗಳ ಮೇಲೆ 'ಪೂರ್ಣ ಪ್ರಮಾಣದ ಆಕ್ರಮಣ' ನಡೆಯುತ್ತಿದೆ. ಭಾರತೀಯ ಪ್ರಜಾಪ್ರಭುತ್ವದ ರಚನೆಗಳು ಕ್ರೂರ ದಾಳಿಗೆ ಒಳಗಾಗಿವೆ ಮತ್ತು ದೇಶದ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ದಾಳಿ ನಡೆದಿದೆ. ಅಮೆರಿಕ ಮತ್ತು ಯುರೋಪ್‌ನಂತಹ ಪ್ರಜಾಸತ್ತಾತ್ಮಕ ರಾಷ್ಟ್ರಗಳು ಇದನ್ನು ಗಮನಿಸುವಲ್ಲಿ ವಿಫಲವಾಗಿವೆ ಎಂದು ರಾಹುಲ್ ಆರೋಪಿಸಿದ್ದಾರೆ.

ಈ ಹೇಳಿಕೆಗಳು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಅವರು ವಿದೇಶಿ ನೆಲದಲ್ಲಿ ಭಾರತವನ್ನು ದೂಷಿಸಿದ್ದಾರೆ ಮತ್ತು ವಿದೇಶಿ ಹಸ್ತಕ್ಷೇಪಗಳನ್ನು ಬಯಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ವಿದೇಶದಲ್ಲಿ ಆಂತರಿಕ ರಾಜಕೀಯವನ್ನು ಎತ್ತುವ ಉದಾಹರಣೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿದೆ.

ಭಾರತ ಮತ್ತು ಸಂಸತ್ತು ಸೇರಿದಂತೆ ದೇಶದ ಸಂವಿಧಾನಿಕ ಸಂಸ್ಥೆಗಳ ವಿರುದ್ಧ ರಾಹುಲ್ ಗಾಂಧಿ ಮಾತನಾಡುತ್ತಿದ್ದು, ಸಂಸತ್ತಿಗೆ ಬಂದು ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com