
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಬರ್ಸೂ ಪ್ರದೇಶದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಬಿಹಾರದ ನಿವಾಸಿಗಳಾದ ನಾಲ್ವರು ಪ್ರಯಾಣಿಕರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
28 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ 23 ಮಂದಿಯನ್ನು ಚಿಕಿತ್ಸೆಗಾಗಿ ಇಲ್ಲಿನ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Advertisement