ದೆಹಲಿ ಅಬಕಾರಿ ನೀತಿ: ಏಪ್ರಿಲ್ 3ರವರೆಗೆ ಮನೀಶ್ ಸಿಸೋಡಿಯಾರ ನ್ಯಾಯಾಂಗ ಬಂಧನ ವಿಸ್ತರಣೆ, ಜಾಮೀನು ವಿಚಾರಣೆ ನಾಳೆ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ಕೋರ್ಟ್ ಸೋಮವಾರ 14 ದಿನಗಳವರೆಗೆ ವಿಸ್ತರಿಸಿದೆ.
ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ಕೋರ್ಟ್ ಸೋಮವಾರ 14 ದಿನಗಳವರೆಗೆ ವಿಸ್ತರಿಸಿದೆ.

ಸಿಸೋಡಿಯಾ ಅವರು ಸದ್ಯ ಮಾರ್ಚ್ 22 ರವರೆಗೆ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಯಲ್ಲಿದ್ದಾರೆ ಮತ್ತು ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಪ್ರಕರಣವು ದೆಹಲಿಯಲ್ಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಆಪಾದಿತ ಅಕ್ರಮಗಳಿಗೆ ಸಂಬಂಧಿಸಿದೆ.

ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಅವರು ಸೋಮವಾರ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 3 ರವರೆಗೆ ವಿಸ್ತರಿಸಿದರು. ಈ ವಿಷಯದಲ್ಲಿ ಜಾಮೀನು ಅರ್ಜಿಯನ್ನು ಮಾರ್ಚ್ 21ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ. 

ದೆಹಲಿಯ ಮಾಜಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರು ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ಎಲ್ಲಾ ವಿಚಾರಣೆಗಳನ್ನು ಈಗಾಗಲೇ ಮಾಡಿರುವುದರಿಂದ ಅವರನ್ನು ಕಸ್ಟಡಿಯಲ್ಲಿಡಲು ಯಾವುದೇ ಪ್ರಮುಖ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.

ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಇತ್ತೀಚೆಗೆ ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com