ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿ ಮಾಡಲಿರುವ ಮಮತಾ ಬ್ಯಾನರ್ಜಿ: ತೃತೀಯ ರಂಗ ರಚನೆಯ ಊಹಾಪೋಹ

ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ವಾರ ಒಡಿಶಾಕ್ಕೆ ಭೇಟಿ ನೀಡುತ್ತಿದ್ದು, ಒಡಿಶಾ ಮುಖ್ಯಮಂತ್ರಿ ಮತ್ತು ಬಿಜು ಜನತಾ ದಳದ ಅಧ್ಯಕ್ಷ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ.
ಮಮತಾ ಬ್ಯಾನರ್ಜಿ, ನವೀನ್ ಪಟ್ನಾಯಕ್(ಸಂಗ್ರಹ ಚಿತ್ರ)
ಮಮತಾ ಬ್ಯಾನರ್ಜಿ, ನವೀನ್ ಪಟ್ನಾಯಕ್(ಸಂಗ್ರಹ ಚಿತ್ರ)
Updated on

ನವದೆಹಲಿ: ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ವಾರ ಒಡಿಶಾಕ್ಕೆ ಭೇಟಿ ನೀಡುತ್ತಿದ್ದು, ಒಡಿಶಾ ಮುಖ್ಯಮಂತ್ರಿ ಮತ್ತು ಬಿಜು ಜನತಾ ದಳದ ಅಧ್ಯಕ್ಷ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ.

ಕಾಂಗ್ರೆಸ್-ಅಲ್ಲದ ಬಿಜೆಪಿಯೇತರ ರಂಗ ರಚನೆಯ ಬಗ್ಗೆ ಇತ್ತೀಚೆಗೆ ಭಾರೀ ಸುದ್ದಿಯಾಗುತ್ತಿದೆ. ವರದಿಗಳ ಪ್ರಕಾರ, ಮಮತಾ ಬ್ಯಾನರ್ಜಿ ಅವರು ಇಂದು ಒಡಿಶಾಗೆ ಮೂರು ದಿನಗಳ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. ಮಮತಾ ಈ ತಿಂಗಳ ಅಂತ್ಯದ ವೇಳೆಗೆ ಅಥವಾ ಏಪ್ರಿಲ್ ಆರಂಭದಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ನಂತರ ದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದೆ, ಭಾರತೀಯ ಜನತಾ ಪಕ್ಷಕ್ಕೆ (BJP) ಸವಾಲೆಸೆಯಲು ಕಾಂಗ್ರೆಸ್, 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ರಂಗವನ್ನು ರಚಿಸುವ ಯೋಜನೆಗಳನ್ನು ದೃಢಪಡಿಸಲು ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ. 

ಪ್ರತಿಪಕ್ಷಗಳ ವಿರುದ್ಧ ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಕುರಿತು ಇತ್ತೀಚೆಗೆ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಕನಿಷ್ಠ ಎಂಟು ವಿರೋಧ ಪಕ್ಷಗಳ ನಾಯಕರನ್ನು ಮಮತಾ ಭೇಟಿಯಾಗಲಿದ್ದಾರೆ ಎಂಬ ಊಹಾಪೋಹಗಳು ಹರಡಿವೆ. ಪತ್ರಕ್ಕೆ ಸಹಿ ಹಾಕಿದವರಲ್ಲಿ ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್, ಫಾರೂಕ್ ಅಬ್ದುಲ್ಲಾ (ಎನ್‌ಸಿ), ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಶಿವಸೇನಾ ನಾಯಕ ಉದ್ಧವ್ ಠಾಕ್ರೆ, ಅರವಿಂದ್ ಕೇಜ್ರಿವಾಲ್ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಇತರರು ಸೇರಿದ್ದಾರೆ.

ಆದರೆ, ಕೇರಳ ಸಿಎಂ ಪಿಣರಾಯಿ ವಿಜಯನ್ ನಂತರ ಪ್ರಧಾನಿ ಮೋದಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದರೂ ಕಾಂಗ್ರೆಸ್, ಜೆಡಿಎಸ್, ಜೆಡಿ(ಯು), ಮತ್ತು ಸಿಪಿಐ(ಎಂ) ಪಟ್ಟಿಯಿಂದ ನಾಪತ್ತೆಯಾಗಿದ್ದವು. ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿರುವ ಹಿರಿಯ ಸಿಪಿಐ(ಎಂ) ನಾಯಕರೊಬ್ಬರು, ಪಕ್ಷವು ತೃತೀಯ ರಂಗಕ್ಕೆ ಒಲವು ಹೊಂದಿಲ್ಲ ಏಕೆಂದರೆ ಅದು ವಿರೋಧ ಪಕ್ಷದ ಜಾಗವನ್ನು ಛಿದ್ರಗೊಳಿಸುತ್ತದೆ ಎಂದಿದ್ದಾರೆ. 

ತೃತೀಯ ರಂಗದ ಕಲ್ಪನೆಯನ್ನು ತಳ್ಳಿಹಾಕಿದ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಕಳೆದ ವಾರ ಮಮತಾ ಬ್ಯಾನರ್ಜಿ ಅವರು ಬಿಜೆಪಿಯನ್ನು ಸೋಲಿಸುವ ಪ್ರಾದೇಶಿಕ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

TNIE ಯೊಂದಿಗೆ ಮಾತನಾಡಿದ ರಾಜಕೀಯ ವಿಶ್ಲೇಷಕ ಸಂದೀಪ್ ಶಾಸ್ತ್ರಿ, ಪ್ರಾದೇಶಿಕ ನಾಯಕರು ತಮ್ಮ ನೆಲೆಯನ್ನು ಉಳಿಸಿಕೊಳ್ಳಲು ಮೈತ್ರಿ ಮಾಡಿಕೊಳ್ಳುತ್ತಿದ್ದರೂ, ಬಿಜೆಪಿ ತೃತೀಯ ರಂಗದ ಹೊರಹೊಮ್ಮುವಿಕೆಯನ್ನು ಪೂರ್ಣ ಹೃದಯದಿಂದ ಸ್ವಾಗತಿಸುತ್ತದೆ ಎಂದು ಹೇಳಿದರು. “ಒರಿಸ್ಸಾ, ತೆಲಂಗಾಣ, ಯುಪಿ ಮತ್ತು ಇತರ ರಾಜ್ಯಗಳ ಪ್ರಾದೇಶಿಕ ನಾಯಕರನ್ನು ಮಮತಾ  ಬ್ಯಾನರ್ಜಿ ಭೇಟಿ ಮಾಡುತ್ತಿದ್ದಾರೆ, ಬಿಜೆಪಿಯನ್ನು ವಿರೋಧಿಸುವ ರಾಜ್ಯ ಮೂಲದ ಪಕ್ಷಗಳ ಮೈತ್ರಿಯನ್ನು ಒಟ್ಟಾಗಿ ನಿರ್ಮಿಸಲು ಪ್ರಯತ್ನಿಸುವುದು ಮಮತಾ ಅವರ ಆಲೋಚನೆಯಾಗಿದೆ ಎನ್ನುತ್ತಾರೆ. 

ಪ್ರಸ್ತುತ ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ಕರೆದಿರುವ ಪ್ರತಿಪಕ್ಷಗಳ ಸಭೆಗಳಿಂದ ಟಿಎಂಸಿ ದೂರ ಉಳಿಯುತ್ತಿದ್ದರೆ, ಇಬ್ಬರ ನಡುವೆ ಶಾಂತಿ ಕದಡುವ ಪ್ರಯತ್ನಗಳು ಅಂತ್ಯಗೊಂಡಿವೆ ಎಂದು ಒಳಗಿನವರು ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಟಿಎಂಸಿ ನಡುವೆ ಆಗಾಗ ನಡೆಯುವ ಮಾತಿನ ಚಕಮಕಿಯೂ ಉಭಯ ಪಕ್ಷಗಳ ನಡುವೆ ಹೆಚ್ಚುತ್ತಿರುವ ಹಗೆತನವನ್ನು ವಿವರಿಸುತ್ತದೆ.

ಇತ್ತೀಚೆಗೆ ನಡೆದ ಪಕ್ಷದ ಆಂತರಿಕ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು, ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಮತ್ತು ಸಂಸತ್ತಿನ ಕಾರ್ಯನಿರ್ವಹಣೆಯನ್ನು ತಡೆಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು 'ಹೀರೋ' ಆಗಿ ಬಿಜೆಪಿ ಮಾಡಿದೆ ಎಂದು ಆರೋಪಿಸಿದರು. ಹಳೆಯ ಪಕ್ಷವು ಬಿಜೆಪಿಯೊಂದಿಗೆ ಮೌನ ಒಪ್ಪಂದದಲ್ಲಿದೆ ಎಂದು ಟಿಎಂಸಿ ಮುಖ್ಯಸ್ಥರ ಆರೋಪ ಬ್ಯಾನರ್ಜಿಯವರೊಂದಿಗೆ ಶಾಶ್ವತವಾಗಿ ಜಗಳವಾಡುತ್ತಿರುವ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರ ಹಗೆತನವನ್ನು ಎತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com