ಲಖನೌ: ಆಫೀಸ್ ನಲ್ಲಿ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಫೋಟೋ ಹಾಕಿದ್ದ ಉತ್ತರ ಪ್ರದೇಶ ವಿದ್ಯುತ್ ನಿಗಮ ನಿಯಮಿತದ (ಯುಪಿಸಿಎಲ್) ಉಪವಿಭಾಗಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ವಿಚಾರಣೆ ನಂತರ ಅಧಿಕಾರಿ ರವೀಂದ್ರ ಪ್ರಕಾಶ್ ಗೌತಮ್ ನನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಯುಪಿಸಿಎಲ್ ಅಧ್ಯಕ್ಷ ಎಂ. ದೇವರಾಜ್ ಆದೇಶಿಸಿದ್ದಾರೆ.
ಹತ್ಯೆಗೀಡಾಗಿರುವ ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ ತನ್ನ ಆರಾಧ್ಯ ದೈವನಂತೆ ಆತನ ಪ್ರತಿಮೆ ಮತ್ತು ಫೋಟೋವನ್ನು ಗೌತಮ್ ಕಚೇರಿಯಲ್ಲಿ ಹಾಕಿದ್ದು ತನಿಖೆ ವೇಳೆಯಲ್ಲಿ ಕಂಡುಬಂದಿದೆ ಎಂದು ದಕ್ಷಿಣಾಂಚಲ್ ವಿದ್ಯುತ್ ವಿತರಣಾ ನಿಗಮದ ಎಂಡಿ ಅಮಿತ್ ಕಿಶೋರ್ ಪಿಟಿಐಗೆ ತಿಳಿಸಿದ್ದಾರೆ. ಸೋಮವಾರ ಎಸ್‌ಡಿಒ ಗೌತಮ್ ನನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಜೂನ್ 2022ರಲ್ಲಿ ಫರೂಕಾಬಾದ್ ಜಿಲ್ಲೆಯ ಕಾಯಮ್‌ಗಂಜ್ ಉಪವಿಭಾಗ-II ರಲ್ಲಿ ಸೇವೆಗೆ ನಿಯೋಜಿಸಿದ್ದಾಗ ಗೌತಮ್ ಫೋಟೋ ಹಾಕಿದ್ದು, ಕೊಠಡಿಯ ವಿಡಿಯೋ ವೈರಲ್ ಆದ ನಂತರ ಪ್ರಾಥಮಿಕ ತನಿಖೆ ನಡೆಸಿ ಆತನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Advertisement