ಮಾಜಿ ಸಿಎಂ ಎಸ್ ಎಂ ಕೃಷ್ಣ, ಸುಧಾಮೂರ್ತಿ, ಎಸ್ ಎಲ್ ಬೈರಪ್ಪ, ಖಾದರ್‌ವಲ್ಲಿ ಸೇರಿ 106 ಸಾಧಕರಿಗೆ 'ಪದ್ಮ ಪ್ರಶಸ್ತಿ' ಪ್ರದಾನ

ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಸುಧಾ ಮೂರ್ತಿ ಹಾಗೂ ಸಾಹಿತಿ ಎಸ್‌.ಎಲ್‌.ಭೈರಪ್ಪ ಸೇರಿದಂತೆ ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ. 
ಪದ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಪದ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
Updated on

ನವದೆಹಲಿ: ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಸುಧಾ ಮೂರ್ತಿ ಹಾಗೂ ಸಾಹಿತಿ ಎಸ್‌.ಎಲ್‌.ಭೈರಪ್ಪ ಸೇರಿದಂತೆ ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ. 

2023ನೇ ಸಾಲಿನಲ್ಲಿ ಪದ್ಮ ಪ್ರಶಸ್ತಿಗೆ ಭಾಜನರಾದ 106 ಮಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಿದ್ದು, ಈ ಬಾರಿ ಕರ್ನಾಟಕದ 8 ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸುಧಾ ಮೂರ್ತಿ ಹಾಗೂ ಸಾಹಿತಿ ಎಸ್‌.ಎಲ್‌.ಭೈರಪ್ಪ ಸೇರಿದಂತೆ ಒಟ್ಟು 106 ಮಂದಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ. ಈ ಬಾರಿ ಕರ್ನಾಟಕದ 8 ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

2023ನೇ ಸಾಲಿನಲ್ಲಿ 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. 91 ವರ್ಷದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಪದ್ಮವಿಭೂಷಣ ಪ್ರಶಸ್ತಿಪ್ರಧಾನ ಮಾಡಲಾಗಿದೆ. ಇನ್ನು ಸಾಹಿತಿ ಭೈರಪ್ಪ ಹಾಗೂ ಸುಧಾಮೂರ್ತಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಉಳಿದಂತೆ ಕರ್ನಾಟಕದಿಂದ ವಿಜ್ಞಾನಿ ಖಾದರ್‌ವಲ್ಲಿ ದುಡೇಕುಲ, ಉಮ್ಮತ್ತಾಟ್‌ ನೃತ್ಯ ಕಲಾವಿದೆ ರಾಣಿ ಮಾಚಯ್ಯ, ತಮಟೆ ವಾದಕ ಮುನಿವೆಂಕಟಪ್ಪ, ರಶೀದ್‌ ಅಹಮದ್‌ ಖಾದ್ರಿ, ಎಸ್‌.ಸುಬ್ಬರಾಮನ್‌ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಇವರಲ್ಲದೇ ಖ್ಯಾತ ಗಾಯಕಿ ವಾಣಿ ಜಯರಾಂ ಹಾಗೂ ಆಸ್ಕರ್‌ ಪ್ರಶಸ್ತಿ ಗೆದ್ದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅವರು ಸಹ ಪ್ರಶಸ್ತಿ ಸ್ವೀಕರಿಸಿದ್ದಾರೆ.

ರಾಕೇಶ್ ಜುಂಜನ್ವಾಲಾಗೆ ಮರಣೋತ್ತರ ಪದ್ಮಶ್ರೀ
ಅಂತೆಯೇ ಷೇರು ಮಾರುಕಟ್ಟೆಯಲ್ಲಿ ಅಪ್ರತಿಮ ಸಾಧನೆ ಮೂಲಕ ದೇಶದ ಹೂಡಿಕೆ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಟಿಸಿದ ರಾಕೇಶ್ ಜುಂಜುನ್ವಾಲ ಇತ್ತೀಚೆಗಷ್ಟೇ ನಿಧನರಾಗಿದ್ದಾರೆ. ರಾಕೇಶ್ ಜುಂಜುನುವಾಲ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ರಾಕೇಶ್ ಜುಂಜುನವಾಲ್ ಪರವಾಗಿ ಅವರ ಪತ್ನಿ ರೇಖಾ ಜುಂಜುನವಾಲ ಪ್ರಶಸ್ತಿ ಸ್ವೀಕರಿಸಿದರು. ಈ ವೇಳೆ ಜುಂಜುನವಾಲ ಕುಟುಂಬಸ್ಥರು ಉಪಸ್ಥಿತರಿದ್ದರು.

ವಾಸ್ತುಶಿಲ್ವ ಸಾಧನೆಯಲ್ಲಿ ಗುಜರಾತ್‌ನ ಬಾಲಕೃಷ್ಣ ದೋಶಿ(ಮರಣೋತ್ತರ), ಕಲಾ ಸಾಧನೆಗೈದ ಮಹಾರಾಷ್ಟ್ರದ ಝಾಕೀರ್ ಹುಸೈನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಕರ್ನಾಟಕ ಮಾಜಿ ಸಿಎಂ ಎಂಎಸ್ ಕೃಷ್ಣ, ಮೆಡಿಸಿನ್ ಕ್ಷೇತ್ರದಲ್ಲಿನ ಸಾಧನೆಗೆ ಪಶ್ಚಿಮ ಬಂಗಾಳದ ದಿಲೀಪ್ ಮಹಾಲಾನಬಿಸ್ (ಮರಣೋತ್ತರ), ವಿಜ್ಞಾನ ಹಾಗೂ ಎಂಜಿನೀಯರ್, ಅಮೆರಿಕದ ಶ್ರೀನಿವಾಸ್ ವರ್ಧನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಮುಲಾಯಂ ಸಿಂಗ್ ಯಾದವ್(ಮರಣೋತ್ತರ) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಅಂತೆಯೇ ಛತ್ತೀಸ್​ಗಡದ ಜಾನಪದ ಕಲಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಪಾಂಡವಾನಿ ಗಾಯಕಿ ಉಷಾ ಬಾರ್ಲೆ ಅವರು ಪದ್ಮ ಶ್ರೀ ಪ್ರಶಸ್ತಿ ಸ್ವೀಕರಿಸಿದರು. ಇನ್ನೂ ಸುಕಮ ಆಚಾರ್ಯ, ಜೋಧಯ್ಯಬಾಯಿ ಬೈಗಾ, ಪ್ರೇಮ್ಜಿತ್ ಬರಿಯಾ, ಮುನೀಶ್ವರ ಚಂದಾವರ, ಹೇಮಂತ್ ಚೌಹಾಣ್ ಭಾನುಭಾಯಿ ಚಿತಾರಾ, ಹೆಮೊಪ್ರೊವಾ ಚುಟಿಯಾ, ನರೇಂದ್ರ ಚಂದ್ರ ದೆಬ್ಬರ್ಮ (ಮರಣೋತ್ತರ),ಸುಭದ್ರಾ ದೇವಿ ಪದ್ಮ ಶ್ರೀ ಪ್ರಶಸ್ತಿ ಸ್ವೀಕರಿಸಿದರು.

ಖಾದರ್ ವಲ್ಲಿ ದೂದೇಕುಲ, ಹೇಂ ಚಂದ್ರ ಗೋಸ್ವಾಮಿ, ಪ್ರಿತಿಕಾನಾ ಗೋಸ್ವಾಮಿ, ರಾಧಾ ಚರಣ್ ಗುಪ್ತಾ, ಮೊಡಡುಗು ವಿಜಯ್ ಗುಪ್ತಾ, ಅಹ್ಮದ್ ಹುಸೇನ್ ಮತ್ತು ಮೊಹಮ್ಮದ್ ಹುಸೇನ್ (ಜೋಡಿ), ದಿಲ್ಶಾದ್ ಹುಸೇನ್, ಭಿಕು ರಾಮ್‌ಜಿ ಇದತೇ, ಸಿ ಐ ಇಸಾಕ್, ರತ್ತನ್ ಸಿಂಗ್ ಜಗ್ಗಿ, ಬಿಕ್ರಮ್ ಬಹದ್ದೂರ್ ಜಮಾತಿಯಾ ಅವರು ಪದ್ಮ ಶ್ರೀ ಪ್ರಶಸ್ತಿ ಸ್ವೀಕರಿಸಿದರು.

ಇನ್ನೂ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಒಟ್ಟು 106 ಮಂದಿಗೆ ಪದ್ಮಪುರಸ್ಕಾರದ ಗೌರವ ದೊರೆಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಸೇರಿದಂತೆ ಹಲವು ಗಣ್ಯರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com