
ನವದೆಹಲಿ: ಸಿಬಿಐ ಮತ್ತು ಇಡಿ ಸೇರಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳ "ನಿರಂಕುಶ" ಬಳಕೆಯ ವಿರುದ್ಧ ಕಾಂಗ್ರೆಸ್ ನೇತೃತ್ವದ 14 ರಾಜಕೀಯ ಪಕ್ಷಗಳು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ. ಏಪ್ರಿಲ್ 5 ರಂದು ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ರಾಷ್ಟ್ರೀಯ ಜನತಾ ದಳ, ತೃಣಮೂಲ ಕಾಂಗ್ರೆಸ್, ಡಿಎಂಕೆ ಸೇರಿದಂತೆ 14 ರಾಜಕೀಯ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಪ್ರತಿಪಕ್ಷ ನಾಯಕರ ನಿರಂಕುಶ ಬಂಧನದಿಂದಾಗಿ ಆರೆಸ್ಟ್ ಮಾಡುವ ಮುನ್ನಾ, ಹಾಗೂ ತದನಂತರ ಸಿಬಿಐ ಮತ್ತು ಇಡಿಗೆ ಮಾರ್ಗಸೂತ್ರಕ್ಕೆ ಮನವಿ ಮಾಡಲಾಗಿದೆ.
2019 ರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿಕಾರ ಹೇಳಿಕೆಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ ಈ ಬೆಳವಣಿಗೆಯಾಗಿದೆ. ಇದು ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಇತ್ತೀಚಿನ ಸಮರವಾಗಿದೆ.
ಹಲವು ಕಾಂಗ್ರೆಸ್ಸೇತರ ಮುಖ್ಯಮಂತ್ರಿಗಳು ರಾಹುಲ್ ಗಾಂಧಿ ಅವರ ಸೂರತ್ ನ್ಯಾಯಾಲಯದ ತೀರ್ಪನ್ನು ಖಂಡಿಸಿದರೆ, ಕಾಂಗ್ರೆಸ್ ಶುಕ್ರವಾರ ವಿಪಕ್ಷಗಳ ಸಭೆ ಆಯೋಜಿಸಿದೆ. ಎಎಪಿಯ ಮನೀಶ್ ಸಿಸೋಡಿಯಾ, ಬಿಆರ್‌ಎಸ್‌ನ ಕೆ ಕವಿತಾ ಮತ್ತು ಆರ್‌ಜೆಡಿಯ ತೇಜಸ್ವಿ ಕೇಂದ್ರೀಯ ತನಿಖಾ ಸಂಸ್ಥೆಗಳ ದಾಳದಲ್ಲಿ ಸಿಲುಕಿರುವ ಪ್ರಮುಖ ರಾಜಕೀಯ ನಾಯಕರಾಗಿದ್ದಾರೆ.
ದೆಹಲಿ ಮದ್ಯ ಹಗರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಮತ್ತು ಇಡಿ ಬಂಧಿಸಿದೆ, ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ ಕವಿತಾ ಅವರನ್ನು ಪ್ರಶ್ನಿಸಲಾಗಿದೆ ಮತ್ತು ತೇಜಸ್ವಿ ಮತ್ತು ಅವರ ಕುಟುಂಬ ಸದಸ್ಯರನ್ನು ಉದ್ಯೋಗಕ್ಕಾಗಿ ಜಮೀನು ಪ್ರಕರಣಕ್ಕಾಗಿ ತನಿಖೆ ನಡೆಸಲಾಗುತ್ತಿದೆ.
Advertisement