ನವದೆಹಲಿ: ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಕಾನೂನು ಮತ್ತು ರಾಜಕೀಯವಾಗಿ ಹೋರಾಟ ನಡೆಸುವುದಾಗಿ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ನಾವು ಹೆದರುವುದು ಅಥವಾ ಮೌನವಾಗಿರುವುದಿಲ್ಲ, ಪ್ರಧಾನಿ ಮೋದಿ- ಅದಾನಿ ನಡುವಿನ ಮಹಾ ಮೆಗಾ ಹಗರಣದ ಬಗ್ಗೆ ಜೆಪಿಸಿ ತನಿಖೆಗೆ ವಹಿಸುವ ಬದಲು ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ. ಭಾರತದ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂದಿದ್ದಾರೆ.
ರಾಹುಲ್ ಗಾಂಧಿ ವಿರುದ್ಧದ ಕ್ರಮದಿಂದ ದಿಗ್ಭ್ರಮೆಗೊಂಡಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. ರಾಜಕೀಯ ಕಾರಣದಿಂದ ಹೀಗೆ ಮಾಡಲಾಗಿದ್ದು, ನಮ್ಮ ಪ್ರಜಾಪ್ರಭುತ್ವಕ್ಕೆ ಕೆಟ್ಟದ್ದನ್ನು ಸೂಚಿಸುತ್ತದೆ ಎಂದು ಅವರು ಹೇಳಿದ್ದಾರೆ.
Advertisement