ಅಪರಾಧಿ ಶಾಸಕರು, ಸಂಸದರ ಸ್ವಯಂ ಅನರ್ಹತೆ: ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

ಸಂಸದ ಸ್ಥಾನದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ನಂತರ ಕ್ರಿಮಿನಲ್ ಕೇಸುಗಳಲ್ಲಿ ಅಪರಾಧಿಯಾದವರನ್ನು ಸಂಸದ ಅಥವಾ ಶಾಸಕ ಸ್ಥಾನದಿಂದ ಸ್ವಯಂ ಅನರ್ಹಗೊಳಿಸುವುದನ್ನು ಪ್ರಶ್ನಿಸಿ ಶನಿವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಸಂಸದ ಸ್ಥಾನದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ನಂತರ ಕ್ರಿಮಿನಲ್ ಕೇಸುಗಳಲ್ಲಿ ಅಪರಾಧಿಯಾದವರನ್ನು ಸಂಸದ ಅಥವಾ ಶಾಸಕ ಸ್ಥಾನದಿಂದ ಸ್ವಯಂ ಅನರ್ಹಗೊಳಿಸುವುದನ್ನು ಪ್ರಶ್ನಿಸಿ ಶನಿವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ಜನ ಪ್ರಾತಿನಿಧ್ಯ ಕಾಯ್ದೆ 1951 ನ ಸೆಕ್ಷನ್ 8(3)ರ ಸಾಂವಿಧಾನಿಕ ಮೌಲ್ಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಇಂದು ಅರ್ಜಿ ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ಮತ್ತು ಪಿಹೆಚ್ ಡಿ ತಜ್ಞ ಆಬ ಮುರಳೀಧರನ್ ಅವರು ಅರ್ಜಿ ಸಲ್ಲಿಸಿದ್ದಾರೆ. 

ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 8(3)ರಡಿಯಲ್ಲಿ ಸ್ವಯಂಪ್ರೇರಿತವಾಗಿ ಜನಪ್ರತಿನಿಧಿಗಳನ್ನು ಅನರ್ಹಗೊಳಿಸಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಮಾಡಿದರೆ ಅದು ನಿರಂಕುಶ ಆಡಳಿತ ಕ್ರಮ ಮತ್ತು ಕಾನೂನುಬಾಹಿರವಾಗುತ್ತದೆ ಎಂದು ವಾದಿಸಿದ್ದಾರೆ.

ರಾಹುಲ್ ಗಾಂಧಿಯವರನ್ನು ನಿನ್ನೆ ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಇಂದು ಸಲ್ಲಿಕೆಯಾಗಿರುವ ಅರ್ಜಿ ಮಹತ್ವ ಪಡೆದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com