ಮೋದಿ ಉಪನಾಮದ ಕುರಿತು ರಾಹುಲ್ ಗಾಂಧಿ ಟೀಕೆ ನಿಂದನೀಯ, ರಚನಾತ್ಮಕವಲ್ಲ; ರವಿಶಂಕರ್ ಪ್ರಸಾದ್

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿರುವುದು ಮತ್ತು ನಂತರ ಲೋಕಸಭಾ ಸದಸ್ಯ ಸ್ಥಾನದ ಅನರ್ಹತೆಗೆ ಅದಾನಿ ಗ್ರೂಪ್ ವಿಷಯ ಪ್ರಸ್ತಾಪಿಸುವುದರೊಂದಿಗೆ ಸಂಬಂಧ ಹೊಂದಿದೆ ಎಂಬ ವಾದವನ್ನು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಶನಿವಾರ ತಳ್ಳಿಹಾಕಿದ್ದಾರೆ.
ರವಿಶಂಕರ್ ಪ್ರಸಾದ್
ರವಿಶಂಕರ್ ಪ್ರಸಾದ್
Updated on

ಪಾಟ್ನಾ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿರುವುದು ಮತ್ತು ನಂತರ ಲೋಕಸಭಾ ಸದಸ್ಯ ಸ್ಥಾನದ ಅನರ್ಹತೆ ವಿದ್ಯಾಮಾನಕ್ಕೂ ಅದಾನಿ ಗ್ರೂಪ್ ವಿಷಯ ಪ್ರಸ್ತಾಪಿಸಿರುವುದೇ ಕಾರಣ ಎಂಬ ವಾದವನ್ನು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಶನಿವಾರ ತಳ್ಳಿಹಾಕಿದ್ದಾರೆ.

ರಾಹುಲ್ ಗಾಂಧಿ ಅವರು 2019ರಲ್ಲಿ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದರು ಎಂದು ಪ್ರಸಾದ್ ಹೇಳಿದ್ದಾರೆ.

ದೆಹಲಿಯಲ್ಲಿ ರಾಹುಲ್ ಗಾಂಧಿಯ  ಪತ್ರಿಕಾಗೋಷ್ಠಿಯ ನಂತರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಸಾದ್, ಗುಜರಾತ್ ನ್ಯಾಯಾಲಯವು ರಾಹುಲ್ ಗಾಂಧಿಯವರಿಗೆ ಶಿಕ್ಷೆ ಪ್ರಕಟಿಸಿದ ಬಳಿಕ ನ್ಯಾಯಾಲಯದ ಆದೇಶಕ್ಕೆ ತಡೆ ತರಲು ಕಾಂಗ್ರೆಸ್ ಪಕ್ಷವು ತ್ವರಿತವಾಗಿ ತಮ್ಮ ವಕೀಲರ ತಂಡವನ್ನು ಬಳಸಲಿಲ್ಲ. ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ಸಮಸ್ಯೆಯಿಂದ ಲಾಭ ಪಡೆಯಲು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಹಾಗೆ ಮಾಡುವುದನ್ನು ತಪ್ಪಿಸಿದೆ ಎಂದು ಆರೋಪಿಸಿದ್ದಾರೆ.

ತಾವು ವಿಚಾರಪೂರ್ವಕವಾಗಿ ಮಾತನಾಡುವುದಾಗಿ ರಾಹುಲ್ ಗಾಂಧಿ ಹೇಳುತ್ತಾರೆ. ಹಾಗಿದ್ದಲ್ಲಿ, ಅವರು ಉದ್ದೇಶಪೂರ್ವಕವಾಗಿಯೇ ಒಬಿಸಿಗಳನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ನಂಬುತ್ತದೆ ಮತ್ತು ಇದನ್ನು ಖಂಡಿಸುತ್ತದೆ ಎಂದು ಅವರು ಹೇಳಿದರು.

ರಾಹುಲ್ ಗಾಂಧಿಯವರ ಒಂದೇ ಸಮಸ್ಯೆ ಎಂದರೆ ದೇಶವು ಕಾಂಗ್ರೆಸ್‌ಗೆ ಮತ ಹಾಕುವುದಿಲ್ಲ. ಹಿಂದುಳಿದ ವರ್ಗಗಳ ಉದ್ದೇಶಪೂರ್ವಕ ಅವಮಾನವನ್ನು ಅವರು ಮುಂದುವರಿಸಿದರೆ, ಭವಿಷ್ಯದಲ್ಲಿ ಕಾಂಗ್ರೆಸ್‌ಗೆ ಯಾವುದೇ ಮತಗಳು ಸಿಗುವುದಿಲ್ಲ. ಈ ಅವಮಾನದ ವಿಷಯವನ್ನು ಬಿಜೆಪಿ ರಾಷ್ಟ್ರದಾದ್ಯಂತ ಎತ್ತಲಿದೆ ಎಂದು ಅವರು ಹೇಳಿದರು.

ರಾಹುಲ್ ಗಾಂಧಿಯವರು 'ಮೋದಿ ಉಪನಾಮ'ದ ಬಗ್ಗೆ ಮಾತನಾಡುವಾಗ ರಚನಾತ್ಮಕ ಟೀಕೆಗಳ ಬದಲಿಗೆ ನಿಂದನೀಯ ಭಾಷೆಯನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಅವರ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಕಾರಣವಾಯಿತು. ಕಾಂಗ್ರೆಸ್ ನಾಯಕರು ಒಬಿಸಿಗಳನ್ನು ಅವಮಾನಿಸಿದ್ದಾರೆ. ಈ ವಿಷಯವನ್ನು ಬಿಜೆಪಿಯು ದೇಶದಾದ್ಯಂತ ಶ್ರದ್ಧೆಯಿಂದ ತೆಗೆದುಕೊಳ್ಳುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com