ಅಪರಾಧಿಗಳಿಗೆ ಕ್ಷಮಾಪಣೆ: ಕಡತಗಳೊಂದಿಗೆ ಸಿದ್ಧರಾಗಿರಿ'; ಬಿಲ್ಕಿಸ್ ಬಾನೊ ಅರ್ಜಿ ಕುರಿತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು!

ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿ ಕುರಿತು ಕೇಂದ್ರ, ಗುಜರಾತ್ ಸರ್ಕಾರ ಮತ್ತಿತರರಿಂದ ಪ್ರತಿಕ್ರಿಯೆಯನ್ನು ಸುಪ್ರೀಂಕೋರ್ಟ್ ಸೋಮವಾರ ಕೇಳಿದೆ. 2022ರ ಗೋದ್ರಾ ಹತ್ಯಾಕಾಂಡದ ನಂತರ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ನಡೆದು ಆಕೆಯ ಏಳು ಮಂದಿ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಗಿತ್ತು.
ಕುಟುಂಬದ ಜೊತೆಗಿರುವ ಬಿಲ್ಕಿಸ್ ಬಾನೊ ಪ್ರಕರಣ
ಕುಟುಂಬದ ಜೊತೆಗಿರುವ ಬಿಲ್ಕಿಸ್ ಬಾನೊ ಪ್ರಕರಣ
Updated on

ನವದೆಹಲಿ: ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿ ಕುರಿತು ಕೇಂದ್ರ, ಗುಜರಾತ್ ಸರ್ಕಾರ ಮತ್ತಿತರರಿಂದ ಪ್ರತಿಕ್ರಿಯೆಯನ್ನು ಸುಪ್ರೀಂಕೋರ್ಟ್ ಸೋಮವಾರ ಕೇಳಿದೆ. 2022ರ ಗೋದ್ರಾ ಹತ್ಯಾಕಾಂಡದ ನಂತರ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ನಡೆದು ಆಕೆಯ ಏಳು ಮಂದಿ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಗಿತ್ತು.

ಈ ಪ್ರಕರಣದಲ್ಲಿ 11 ಮಂದಿಗೆ ಆರೋಪಗಳಿಂದ ಖುಲಾಸೆಗೊಳಿಸಿರುವುದನ್ನು ಬಾನೊ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ. ಇದರಲ್ಲಿ ಸಮಸ್ಯೆಗಳ ಸರಮಾಲೆಯೇ ಇದ್ದು, ವಿವರವಾಗಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಹೇಳಿದ ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠ, ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದೆ.

ನ್ಯಾಯಾಲಯಗಳ ಮುಂದೆ ಅನೇಕ ಕೊಲೆ ಪ್ರಕರಣಗಳಿದ್ದು, ಅಪರಾಧಿಗಳು ಕ್ಷಮಾಪಣೆ ಇಲ್ಲದೆ ಅನೇಕ ವರ್ಷಗಳಿಂದ ಜೈಲುಗಳಲ್ಲಿಯೇ ಕೊಳೆಯುತ್ತಿದ್ದಾರೆ. ಇತರ ಪ್ರಕರಣಗಳಂತೆ ಇಲ್ಲಿಯೂ ಏಕರೂಪ ಮಾನದಂಡಗಳನ್ನು ಅನ್ವಯಿಸಲಾಗಿದೆಯೇ ಎಂದು ನ್ಯಾಯಮೂರ್ತಿ ಜೋಸೆಫ್ ಪ್ರಶ್ನಿಸಿದರು. 

ಅಪರಾಧ ಭಯಾನಕವಾಗಿದೆ ಎಂದು ಮೌಖಿಕವಾಗಿ ಸೂಚಿಸಿರುವ ನ್ಯಾಯಾಲಯ, ಸುಪ್ರೀಂ ಕೋರ್ಟ್ ಕೇಂದ್ರ, ಗುಜರಾತ್ ಸರ್ಕಾರ ಮತ್ತು ಅಪರಾಧಿಗಳಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆ ದಿನದಂದು ಕಕ್ಷಿದಾರರ ಕ್ಷಮಾಧಾನಕ್ಕೆ  ಸಂಬಂಧಿತ ಕಡತಗಳೊಂದಿಗೆ ಸಿದ್ಧವಾಗುವಂತೆ ಗುಜರಾತ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. 

ಕಳೆದ ವರ್ಷ ನವೆಂಬರ್ 30 ರಂದು ಗುಜರಾತ್ ಸರ್ಕಾರ 11 ಜೀವಾವಧಿ ಕೈದಿಗಳ ತಾತ್ಕಾಲಿಕ ಬಿಡುಗಡೆ ಪ್ರಶ್ನಿಸಿ ಬಾನೊ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಂತರ ಕಳೆದ ವರ್ಷ ಡಿಸೆಂಬರ್‌ನಲ್ಲಿ ಅವರು ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿ ವಜಾಗೊಂಡಿತ್ತು. ಎಲ್ಲಾ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರವು ವಿನಾಯಿತಿ ನೀಡಿದ್ದರಿಂದ ಕಳೆದ ವರ್ಷ ಆಗಸ್ಟ್ 15 ರಂದು ಎಲ್ಲ ಆರೋಪಿಗಳು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com