ರಾಹುಲ್ ಅನರ್ಹತೆಯ ವಿರುದ್ಧದ ಪ್ರತಿಭಟನೆಯಿಂದ ಪೈಲಟ್ ದೂರ: ಮತ್ತೆ ಮುನ್ನಲೆಗೆ ಬಂದಿತೆ ಗುಂಪುಗಾರಿಕೆ?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಚಿನ್ ಪೈಲಟ್
ಸಚಿನ್ ಪೈಲಟ್
Updated on

ಜೈಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಬಿಕಾನೇರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಸತ್ಯವನ್ನು ಮಾತನಾಡಿದ್ದಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಮಾತ್ರ ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಈ ವಿಷಯದ ಬಗ್ಗೆ ಪಕ್ಷವು ಹೋರಾಟ ಹಾದಿಯಲ್ಲಿರುವಾಗ, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮಾತ್ರ ಇದರಿಂದ ದೂರ ಉಳಿದಿದ್ದು ರಾಜಕೀಯ ವಿಶ್ಲೇಷಕರ ಚರ್ಚೆಗೆ ಮುನ್ನುಡಿ ಬರೆದಿದೆ. 

ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಿಎಂ ಗೆಹ್ಲೋಟ್, ಮೋತಿಲಾಲ್ ನೆಹರು ಮತ್ತು ಪಂಡಿತ್ ಜವಾಹರಲಾಲ್ ನೆಹರು ಅವರು ಭಾರತದ ಸ್ವಾತಂತ್ರ್ಯಕ್ಕೆ ಕಾರಣವಾದ ಚಳವಳಿಯನ್ನು ಮುನ್ನಡೆಸಿದ್ದರು. ಆದರೆ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾಗಿದ್ದರು. ಆದರೆ ಬಿಜೆಪಿಯು ಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡು ದೇಶದಲ್ಲಿ ಏಕತೆಯ ಅಗತ್ಯ ಸಂದೇಶವನ್ನು ನೀಡಿದ ಆ ಕುಟುಂಬದ ಮಗನ ಪ್ರತಿಷ್ಠೆಯನ್ನು ಹಾಳುಮಾಡಿದೆ ಎಂದು ಅವರು ಹೇಳಿದರು.

ಆಡಳಿತ ಪಕ್ಷದ ಅಜೆಂಡಾದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಮಾರ್ಚ್ 28 ಮತ್ತು 29ರಂದು 'ಪ್ರಜಾಪ್ರಭುತ್ವವನ್ನು ಅನರ್ಹಗೊಳಿಸಲಾಗಿದೆ' ಎಂಬ ವಿಷಯದ ಕುರಿತು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಉದಯಪುರ, ಜೋಧ್‌ಪುರ ಮತ್ತು ಕೋಟಾದಲ್ಲಿ ಪತ್ರಿಕಾಗೋಷ್ಠಿಗಳು ನಡೆಯಲಿದ್ದು, ಗೆಹ್ಲೋಟ್ ಸ್ವತಃ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಆದಾಗ್ಯೂ, ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಉದ್ದೇಶಿಸಿರುವ ನಾಯಕರ ಪಟ್ಟಿಯಲ್ಲಿ ಸಚಿನ್ ಪೈಲಟ್ ಅವರ ಹೆಸರು ಕಾಣೆಯಾಗಿದೆ. ಇದಕ್ಕೆ ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಮತ್ತೆ ಮತ್ತೆ ಗುಂಪುಗಾರಿಕೆಯೇ ಕಾರಣ ಎಂದು ರಾಜಕೀಯ ವೀಕ್ಷಕರು ಊಹೆ ಮಾಡುತ್ತಿದ್ದಾರೆ. ಪೈಲಟ್ ಅವರು ಬೆಟ್ಟು ಮಾಡಿದ ವಿಷಯಗಳ ಬಗ್ಗೆ ಯಾವುದೇ ಗಟ್ಟಿ ನಿರ್ಧಾರಗಳನ್ನು ತೆಗೆದುಕೊಳ್ಳದ ಕಾರಣಕ್ಕಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ ಅಡ್ಡಗಾಲು ಹಾಕಿದ್ದಾರೆ ಎಂಬ ವದಂತಿಗಳು ಹೊರಹೊಮ್ಮಿವೆ.

ಇದು ಪೈಲಟ್ ಅವರನ್ನು ರಾಜ್ಯ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಅಥವಾ ಪ್ರಚಾರ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಲು ಪೈಲಟ್ ಶಿಬಿರದ ಕಡೆಯಿಂದ ಒತ್ತಡದ ತಂತ್ರವಾಗಿರಬಹುದು. ಈ ಮೂಲಕ ಟಿಕೆಟ್ ಹಂಚಿಕೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವುದನ್ನು ಖಚಿತಪಡಿಸಿಕೊಳ್ಳಲು ನೋಡುತ್ತಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com