ಮಧ್ಯಪ್ರದೇಶ: ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದ್ದು, ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದ ಪರಿಣಾಮ 14 ಮಂದಿ ಸಾವನ್ನಪ್ಪಿದ್ದಾರೆ.
ರಾಮನವಮಿ ಅಂಗವಾಗಿ ಹೆಚ್ಚಿನ ಜನ ಸೇರಿದ್ದ್ ಅಹಿನ್ನೆಲೆಯಲ್ಲಿ ಬಾವಿಯ ಮೇಲ್ಭಾಗ ಕುಸಿದಿದೆ. ಈ ಭಾಗದಲ್ಲಿ ದೇವಾಲಯವಿತ್ತು.
ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಗಳಿವೆ.
40 ಅಡಿ ಆಳದ ಬಾವಿ ಇದಾಗಿದ್ದು, ಈ ವರೆಗಿನ ಮಾಹಿತಿಯ ಪ್ರಕಾರ, 18 ಮಂದಿ ಭಕ್ತಾದಿಗಳು ಬಾವಿಯ ಒಳಗೆ ಸಿಲುಕಿಕೊಂಡಿರುವ ಸಾಧ್ಯತೆಗಳಿವೆ.
"ಇದೊಂದು ದುರದೃಷ್ಟಕರ ಘಟನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಜನರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
Advertisement