ಬಹು ನಿರೀಕ್ಷಿತ ಒಬಿಸಿ ಸಮೀಕ್ಷೆ ಆರಂಭಿಸಿದ ಒಡಿಶಾ

ಭುವನೇಶ್ವರ: ಬಹು ನಿರೀಕ್ಷಿತ ಇತರೆ ಹಿಂದುಳಿದ ವರ್ಗಗಳ(ಒಬಿಸಿ) ಸಮೀಕ್ಷೆಯನ್ನು ಸೋಮವಾರ ಒಡಿಶಾದಾದ್ಯಂತ ಆರಂಭವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಮೀಕ್ಷೆಯನ್ನು ಒಡಿಶಾ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆನ್‌ಲೈನ್ ಮತ್ತು ಆಫ್‌ಲೈನ್ ಮೋಡ್‌ನಲ್ಲಿ ನಡೆಸುತ್ತಿದ್ದು, ಮೇ 1 ರಿಂದ ಮೇ 27 ರವರೆಗೆ ಸಮೀಕ್ಷೆ ನಡೆಸಲಿದೆ.
ರಾಜ್ಯದ ಎಲ್ಲಾ 314 ಬ್ಲಾಕ್‌ಗಳು ಮತ್ತು 114 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಸಮೀಕ್ಷೆ ನಡೆಸಲಾಗುತ್ತಿದೆ.
ಒಡಿಶಾ, ಬಿಹಾರದ ನಂತರ ಒಬಿಸಿ ಸಮೀಕ್ಷೆಯನ್ನು ನಡೆಸುತ್ತಿರುವ ಎರಡನೇ ರಾಜ್ಯವಾಗಿದೆ.
ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ 208 ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿ ಕುಟುಂಬದ ಒಬ್ಬ ಸದಸ್ಯರು ಗುರುತಿನ ಚೀಟಿಗಳಾದ ಆಧಾರ್, ವೋಟರ್ ಐಡಿ, ಪ್ಯಾನ್ ಕಾರ್ಡ್ ಅಥವಾ ಪಾಸ್‌ಪೋರ್ಟ್‌ನೊಂದಿಗೆ ಸಮೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಬಹುದು ಮತ್ತು ಸಮೀಕ್ಷೆಯ ನಮೂನೆಗಳನ್ನು ಭರ್ತಿ ಮಾಡಬಹುದು. ಪರ್ಯಾಯವಾಗಿ, ಅವರು ಒಡಿಶಾ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ(OSCBC) ವೆಬ್‌ಸೈಟ್‌ಗೆ ಲಾಗ್ ಇನ್ ಮಾಡುವ ಮೂಲಕ ಆನ್‌ಲೈನ್‌ನಲ್ಲೂ ತಮ್ಮ ವಿವರ ಸಲ್ಲಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


