ಪಲ್ಟಿಯಾಗಿದ್ದ ಆಂಬ್ಯುಲೆನ್ಸ್
ಪಲ್ಟಿಯಾಗಿದ್ದ ಆಂಬ್ಯುಲೆನ್ಸ್

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ; ಮೂವರು ಸಾವು

ಬುಧವಾರ ಮುಂಜಾನೆ ಕೇರಳದ ತ್ರಿಶೂರ್ ಜಿಲ್ಲೆಯ ಪಂಥಾಲೂರ್‌ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ಪಲ್ಟಿಯಾಗಿದ್ದು, ಯುವ ರೋಗಿಯ ಸೇರಿದಂತೆ ಮೂವರು ದುರಂತ ಅಂತ್ಯ ಕಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತ್ರಿಶೂರ್: ಬುಧವಾರ ಮುಂಜಾನೆ ಕೇರಳದ ತ್ರಿಶೂರ್ ಜಿಲ್ಲೆಯ ಪಂಥಾಲೂರ್‌ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ಪಲ್ಟಿಯಾಗಿದ್ದು, ಯುವ ರೋಗಿಯ ಸೇರಿದಂತೆ ಮೂವರು ದುರಂತ ಅಂತ್ಯ ಕಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಫೆಮಿನಾ (20) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಚಾಲಕನ ನಿಯಂತ್ರಣ ತಪ್ಪಿದ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ.

ಆಕೆಯ ಪತಿ ಅಬಿದ್ (35) ಮತ್ತು ಸಂಬಂಧಿ ರಹಮತ್ (48) ಕೂಡ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕುನ್ನಂಕುಲಂ ಪೊಲೀಸರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

'ಪ್ರಾಥಮಿಕ ವರದಿಗಳ ಪ್ರಕಾರ, ಆಂಬ್ಯುಲೆನ್ಸ್‌ನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಾಯಿತು. ಆಂಬ್ಯುಲೆನ್ಸ್‌ನಲ್ಲಿದ್ದ ಇತರ ಮೂವರು ಗಾಯಗೊಂಡಿದ್ದಾರೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಂಬ್ಯುಲೆನ್ಸ್ ಚಾಲಕ ಶುಹೈಬ್ (29), ಫಾರಿಸ್ (20) ಮತ್ತು ಸಾದಿಕ್ (21) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com