ಕಾಶ್ಮೀರ: ಕಿಶ್ತ್ವಾರ್ ಜಿಲ್ಲೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಮೂವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಗುರುವಾರ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನಾ ಹೆಲಿಕಾಪ್ಟರ್ ಪತನ
ಸೇನಾ ಹೆಲಿಕಾಪ್ಟರ್ ಪತನ
Updated on

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಗುರುವಾರ ಭಾರತೀಯ ಸೇನೆಯ ಎಎಲ್ಎಚ್ ಧ್ರುವ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಸೇನೆಯ ಈ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿಶ್ತ್ವಾರ್ ಜಿಲ್ಲೆಯ ಮರ್ವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡ ಸ್ಥಿತಿಯಲ್ಲಿ ಪೈಲಟ್ ಮತ್ತು ಸಹ ಪೈಲಟ್‌ರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com