ಕಿರುಕುಳ ಪ್ರಕರಣ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಹೈಕೋರ್ಟ್

ಅಸ್ಸಾಂ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಛಾಟಿಸಲಾಗಿರುವ ಅಂಕಿತಾ ದತ್ತಾ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ  ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ವಿ. ಶ್ರೀನಿವಾಸ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಸ್ಸಾಂ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಬಿ.ವಿ.ಶ್ರೀನಿವಾಸ್
ಬಿ.ವಿ.ಶ್ರೀನಿವಾಸ್

ಗುವಾಹಟಿ: ಅಸ್ಸಾಂ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಛಾಟಿಸಲಾಗಿರುವ ಅಂಕಿತಾ ದತ್ತಾ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ  ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ವಿ. ಶ್ರೀನಿವಾಸ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಸ್ಸಾಂ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಅರ್ಜಿದಾರರಿಗೆ ಬಂಧಿತ ಪೂರ್ವ ಜಾಮೀನು  ನೀಡುವುದು ಸೂಕ್ತವಲ್ಲಾ. ಆದ್ದರಿಂದ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಮೂರ್ತಿ ಅಜಿತ್ ಬೋರ್ತಕೂರ್ ಅವರಿದ್ದ ನ್ಯಾಯಪೀಠ ಹೇಳಿತು.

ಏಪ್ರಿಲ್ 26 ರಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಶ್ರೀನಿವಾಸ್, ದತ್ತಾ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಮನವಿ ಮಾಡಿದ್ದರು, ಆದರೆ ಅದನ್ನು ನ್ಯಾಯಾಲಯ ತಿರಸ್ಕರಿಸಿತು. ನಂತರ ಅವರು ಬಂಧನ ಪೂರ್ವ ಜಾಮೀನು ಅರ್ಜಿಯನ್ನು ಸಲ್ಲಿಸಿದರು. ಶ್ರೀನಿವಾಸ್ ಕಳೆದ ಆರು ತಿಂಗಳಿಂದ ತನ್ನಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ದತ್ತಾ ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಈ ಹಿಂದೆ ಬೆಂಗಳೂರಿನ ನ್ಯಾಯಾಲಯ ಶ್ರೀನಿವಾಸ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಗುವಾಹಟಿ ಪೊಲೀಸರ ಐವರು ಸದಸ್ಯರ ತಂಡ ಏಪ್ರಿಲ್ 23 ರಂದು ಬೆಂಗಳೂರಿನ ಶ್ರೀನಿವಾಸ್ ಅವರ ಸಂಬಂಧಿಕರ ಮನೆಗೆ ನೋಟಿಸ್ ಅಂಟಿಸಿ ಮೇ 2 ರೊಳಗೆ ದಿಸ್ಪುರ ಪೊಲೀಸ್ ಠಾಣೆಯಲ್ಲಿ ಹಾಜರಾಗುವಂತೆ ಸೂಚಿಸಲಾಗಿತ್ತು.  ಆದರೆ, ಶ್ರೀನಿವಾಸ್‌ ವಿಚಾರಣೆಗೆ ಗೈರು ಹಾಜರಾಗಿದ್ದು, 10 ದಿನಗಳ ಕಾಲಾವಕಾಶ ಕೋರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com