ಕೋವಿಡ್-19: ದೇಶದಲ್ಲಿಂದು 2,380 ಹೊಸ ಪ್ರಕರಣಗಳು ಪತ್ತೆ, 15 ಮಂದಿ ಸಾವು

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,380 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 27,212 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,380 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 27,212 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೇಶದಾದ್ಯಂತ 15 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 5,31,659 ಕ್ಕೆ ಏರಿಕೆಯಾಗಿದೆ. ಈವರೆಗೆ 4,49,69,630 ಮಂದಿಗೆ ಕೋವಿಡ್ ತಗುಲಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.06 ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.75 ರಷ್ಟಿದೆ. ಸದ್ಯ ಈವರೆಗೆ ಒಟ್ಟು 4,44,10,738 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.18ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com