ಗುಜರಾತ್‌ನಲ್ಲಿ ಐದು ವರ್ಷಗಳಲ್ಲಿ 41 ಸಾವಿರಕ್ಕೂ ಹೆಚ್ಚು ಮಹಿಳೆಯರು ನಾಪತ್ತೆ!

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 41,000 ಕ್ಕೂ ಹೆಚ್ಚು ಮಹಿಳೆಯರು ನಾಪತ್ತೆಯಾಗಿರುವ ಆಘಾತಕಾರಿ ಮಾಹಿತಿ ಅಧಿಕೃತ ಅಂಕಿಅಂಶಗಳಿಂದ ತಿಳಿದು ಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 41,000 ಕ್ಕೂ ಹೆಚ್ಚು ಮಹಿಳೆಯರು ನಾಪತ್ತೆಯಾಗಿರುವ ಆಘಾತಕಾರಿ ಮಾಹಿತಿ ಅಧಿಕೃತ ಅಂಕಿಅಂಶಗಳಿಂದ ತಿಳಿದು ಬಂದಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(NCRB)ದ ಅಂಕಿಅಂಶಗಳ ಪ್ರಕಾರ, 2016 ರಲ್ಲಿ 7,105, 2017 ರಲ್ಲಿ 7,712, 2018 ರಲ್ಲಿ 9,246 ಮತ್ತು 2019 ರಲ್ಲಿ 9,268 ಮಹಿಳೆಯರು ಕಾಣೆಯಾಗಿದ್ದಾರೆ.

2020 ರಲ್ಲಿ, 8,290 ಮಹಿಳೆಯರು ಕಾಣೆಯಾಗಿದ್ದು, ಒಟ್ಟು 41,621 ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ಎನ್ ಸಿಆರ್ ಬಿ ವರದಿ ತಿಳಿಸಿದೆ.

ಅಹಮದಾಬಾದ್ ಮತ್ತು ವಡೋದರಾದಲ್ಲಿ ಕೇವಲ ಒಂದು ವರ್ಷದಲ್ಲಿ(2019-20) 4,722 ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು  2021 ರಲ್ಲಿ ರಾಜ್ಯ ಸರ್ಕಾರವೇ ವಿಧಾನಸಭೆಗೆ ಮಾಹಿತಿ ನೀಡಿತ್ತು.

"ಕೆಲವು ನಾಪತ್ತೆ ಪ್ರಕರಣಗಳಲ್ಲಿ, ಹುಡುಗಿಯರು ಮತ್ತು ಮಹಿಳೆಯರನ್ನು ಗುಜರಾತ್ ಹೊರತುಪಡಿಸಿ ಇತರ ರಾಜ್ಯಗಳಿಗೆ ಕಳುಹಿಸಲಾಗುತ್ತಿದೆ ಮತ್ತು ಅವರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳುತ್ತಿರುವುದನ್ನು ನಾನು ಗಮನಿಸಿದ್ದೇನೆ" ಎಂದು ಮಾಜಿ ಐಪಿಎಸ್ ಅಧಿಕಾರಿ ಮತ್ತು ಗುಜರಾತ್ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸುಧೀರ್ ಸಿನ್ಹಾ ಹೇಳಿದ್ದಾರೆ.

“ಪೊಲೀಸ್ ವ್ಯವಸ್ಥೆಯ ಸಮಸ್ಯೆ ಏನೆಂದರೆ ಅದು ಕಾಣೆಯಾದ ವ್ಯಕ್ತಿಗಳ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಇಂತಹ ಪ್ರಕರಣಗಳು ಕೊಲೆಗಿಂತ ಗಂಭೀರವಾಗಿವೆ. ಏಕೆಂದರೆ ಮಕ್ಕಳು ನಾಪತ್ತೆಯಾದಾಗ, ಪೋಷಕರು ತಮ್ಮ ಮಕ್ಕಳಿಗಾಗಿ ವರ್ಷಗಳ ಕಾಲ ಕಾಯುತ್ತಾರೆ ಮತ್ತು ನಾಪತ್ತೆ ಪ್ರಕರಣವನ್ನು ಸಹ ಪೊಲೀಸರು ಕೊಲೆ ಪ್ರಕರಣದಂತೆಯೇ ಕಟ್ಟುನಿಟ್ಟಾಗಿ ತನಿಖೆ ಮಾಡಬೇಕು ” ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com