ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರವ್ಯಾಪಿ ಪ್ರತಿಭಟನೆ, ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೆಹಲಿ ಸೇರಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ ನಂತರ ಭಾನುವಾರ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು
ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು

ನವದೆಹಲಿ: ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೆಹಲಿ ಸೇರಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ ನಂತರ ಭಾನುವಾರ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಬೇಕು ಮತ್ತು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ 10 ದಿನಗಳಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಶನಿವಾರದ ಎಸ್‌ಕೆಎಂ ಹೇಳಿಕೆ ಪ್ರಕಾರ, ಮೇ 7 ರಂದು ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದ ಸಂಘಟನೆಯ ಹಲವಾರು ಮುಖಂಡರು ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಾರೆ ಮತ್ತು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ನೀಡುತ್ತಾರೆ ಎಂದಿದೆ.

ಗಮನಾರ್ಹವಾಗಿ, ಈಗ ರದ್ದಾಗಿರುವ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಒಂದು ವರ್ಷದ ರೈತರ ಪ್ರತಿಭಟನೆಯನ್ನು ಎಸ್‌ಕೆಎಂ ಮುನ್ನಡೆಸಿತ್ತು.

ಶುಕ್ರವಾರ, ಹರಿಯಾಣ ಗೃಹ ಮತ್ತು ಆರೋಗ್ಯ ಸಚಿವ ಅನಿಲ್ ವಿಜ್, ಜಂತರ್ ಮಂತರ್ ಬಳಿ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ಘೋಷಿಸಿದ್ದರು. 

ಎಎನ್‌ಐ ಜೊತೆ ಮಾತನಾಡಿದ ಹರಿಯಾಣ ಗೃಹ ಸಚಿವರು, ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಸಂಪೂರ್ಣ ಸಹಾನುಭೂತಿ ಮತ್ತು ಬೆಂಬಲವಿದೆ ಎಂದು ಹೇಳಿದರು. ಅವರ ಪರವಾಗಿ ಮಧ್ಯಸ್ಥಿಕೆ ವಹಿಸಲು ಮತ್ತು ಅವರ ಪರವಾಗಿ ಸರ್ಕಾರದೊಂದಿಗೆ ಮಾತನಾಡಲು ಸಿದ್ಧರಿರುವುದಾಗಿ ತಿಳಿಸಿದ್ದರು.

'ಈ ಸಂಪೂರ್ಣ ವಿಷಯ ಇದೀಗ ಉನ್ನತ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ. ನಾನು ಕ್ರೀಡಾ ಸಚಿವನಾಗಿದ್ದರಿಂದ, ನನ್ನ ಸಹಾನುಭೂತಿ ಮತ್ತು ಬೆಂಬಲವು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಇದೆ. ಅವರು ನಾನು ಮಧ್ಯಸ್ಥಿಕೆ ವಹಿಸಲು ಮತ್ತು ಸರ್ಕಾರದೊಂದಿಗೆ ಮಾತನಾಡಲು ಬಯಸಿದರೆ, ನಾನು ಹಾಗೆ ಮಾಡಲು ಸಿದ್ಧನಿದ್ದೇನೆ' ಎಂದು ವಿಜ್ ಹೇಳಿದರು.

ಇದಲ್ಲದೆ, ಕುಸ್ತಿ ಫೆಡರೇಶನ್ ಮುಖ್ಯಸ್ಥರ ವಿರುದ್ಧ ದೆಹಲಿ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ ಮತ್ತು ಪ್ರತಿಭಟನಾ ನಿರತ ಕುಸ್ತಿಪಟುಗಳ ಬೇಡಿಕೆಗಳನ್ನು ಈಡೇರಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಶುಕ್ರವಾರ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com