ಸುಕ್ಮಾ: ಛತ್ತೀಸ್‌ಗಢದಲ್ಲಿ ಮತ್ತೊಂದು ನಕ್ಸಲ್ ಎನ್ಕೌಂಟರ್ ನಡೆದಿದ್ದು, ಇಬ್ಬರು ನಕ್ಸಲೀಯರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.
ಸುಕ್ಮಾ ಜಿಲ್ಲೆಯ ಭೇಜಿ ಪ್ರದೇಶದಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಯೋಧರು ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
"ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದು, ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಶರ್ಮಾ ಅವರೇ ಸಂಪೂರ್ಣ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು. ಪುಲ್ಬಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಸುಕ್ಮಾ ಪೊಲೀಸರು ತಿಳಿಸಿದ್ದಾರೆ.
ಅಂತೆಯೇ ಘಟನಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಸುತ್ತಮುತ್ತಲ ಪ್ರದೇಶ ಮತ್ತು ಹಳ್ಳಿಗಳಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ. ಮೂವರು ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಿ ಫುಲ್‌ಬಾಗ್ಡಿ ಪೊಲೀಸ್ ಠಾಣೆಗೆ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮೊದಲು ಮೇ 1 ರಂದು ಸುಕ್ಮಾ ಜಿಲ್ಲೆಯ ಇಟ್ಟಪಾರಾ ಪ್ರದೇಶದಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಎರಡು ಟಿಪ್ಪರ್ ಟ್ರಕ್‌ಗಳಿಗೆ ನಕ್ಸಲರು ಬೆಂಕಿ ಹಚ್ಚಿದ್ದರು ಎಂದು ಎಸ್ಪಿ ಸುಕ್ಮಾ, ಸುನಿಲ್ ಶರ್ಮಾ ತಿಳಿಸಿದ್ದಾರೆ.
Advertisement