ಕೋವಿಡ್-19: ದೇಶದಲ್ಲಿಂದು ಕಡಿಮೆಯಾದ ಹೊಸ ಪ್ರಕರಣಗಳ ಸಂಖ್ಯೆ, 11 ಮಂದಿ ಸಾವು

ದೇಶದಲ್ಲಿಂದು ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,839 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 25,178 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ದೇಶದಲ್ಲಿಂದು ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,839 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 25,178 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ದೇಶದಲ್ಲಿ ಈವರೆಗೆ 4,49,71,469 ಮಂದಿಗೆ ಸೋಂಕು ತಗುಲಿದ್ದು, ಇಂದು 11 ಮಂದಿ ಸೇರಿದಂತೆ ಒಟ್ಟು 5,31,692 ಮಂದಿ ಈವರೆಗೆ ಸಾವಿಗೀಡಾಗಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.06 ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.76ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ ಈವರೆಗೂ 4,44,14,599 ಮಂದಿ ಸೋಂಕಿತರಾಗಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.18ರಷ್ಟಿದೆ. 

ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೂ 220.66 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com