ಕೇರಳ: ಚಿಕಿತ್ಸೆಗೆ ಕರೆತಂದಿದ್ದ ಆರೋಪಿಯಿಂದ ಚೂರಿ ಇರಿತ, ಯುವ ವೈದ್ಯೆ ಸಾವು

ಪೊಲೀಸ್ ಕಸ್ಟಡಿಯಿಂದ ಚಿಕಿತ್ಸೆಗೆ ಬಂದಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ನೀಡುತ್ತಿದ್ದ ವೈದ್ಯೆಗೆ ಚಾಕು ಇರಿದಿರುವ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತಿರುವನಂತಪುರಂ: ಪೊಲೀಸ್ ಕಸ್ಟಡಿಯಿಂದ ಚಿಕಿತ್ಸೆಗೆ ಬಂದಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ನೀಡುತ್ತಿದ್ದ ವೈದ್ಯೆಗೆ ಚಾಕು ಇರಿದಿರುವ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ.

ಮೃತ ವೈದ್ಯೆಯನ್ನು ವಂದನಾ ದಾಸ್ (23) ಎಂದು ಗುರುತಿಸಲಾಗಿದೆ. ಅವರು ಕೊಲ್ಲಮ್‍ನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯನ್ನು ನೆಡುಂಬನಾದ ಶಾಲಾ ಶಿಕ್ಷಕ ಸಂದೀಪ್ (42) ಎಂದು ಗುರುತಿಸಲಾಗಿದೆ. ಆರೋಪಿ ವೈದ್ಯೆಗೆ 6 ಬಾರಿ ಚಾಕುವಿನಿಂದ ಇರಿದಿದ್ದಾನೆಂದು ತಿಳಿದುಬಂದಿದೆ.

ಹಲವು ಬಾರಿ ಇರಿದ ಹಿನ್ನೆಲೆಯಲ್ಲಿ ವೈದ್ಯೆ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆಯಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮದ್ಯ ಸೇವನೆ ಮಾಡಿ ನೆರೆಹೊರೆಯವರೊಂದಿಗೆ ಹಾಗೂ ಕುಟುಂಬಸ್ಥರೊಂದಿಗೆ ಗಲಾಟೆ ಮಾಡುತ್ತಿದ್ದ ಮಾಹಿತಿ ಬಂದ ನಂತರ ಪೊಲೀಸರು ಆತನನ್ನು ಬಂಧಿಸಿದ್ದರು. ನಂತರ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಆರೋಪಿ ತೀವ್ರ ಹಿಂಸಾತ್ಮಕವಾಗಿ ವರ್ತಿಸುತ್ತಿದ್ದ. ಚಿಕಿತ್ಸೆ ವೇಳೆ ಪೊಲೀಸರಿಗೆ ಒಳಗೆ ಪ್ರವೇಶಿಸಲು ಅನುಮತಿ ನೀಡದ ಕಾರಣ ನಾವು ಹೊರಗೆ ಇರಬೇಕಾಯಿತು. ಈ ವೇಳೆ ಆರೋಪಿ ವೈದ್ಯೆಯನ್ನು ಚೂರಿ ಹಿಡಿದುಕೊಂಡು ಅಟ್ಟಿಸಿಕೊಂಡು ಬಂದಿದ್ದ, ಪೊಲೀಸರು ತಡೆಯಲು ಯತ್ನಿಸಿದ್ದರು. ಆದರೆ, ಸಾಧ್ಯವಾಗಲಿಲ್ಲ. ಚೂರಿ ಇರಿತದ ಬಳಿಕ ಹರಸಾಹಸ ಪಟ್ಟು ಆತನನ್ನು ಬಂಧನಕ್ಕೊಳಪಡಿಸಲಾಯಿತು. ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಗೆ ಭಾರತೀಯ ವೈದ್ಯರ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಆರೋಪಿಗಳು ಹಾಗೂ ಅಪರಾಧಿಗಳಿಗೆ ಚಿಕಿತ್ಸೆ ನೀಡುವ ವೇಳೆ ಕೋಳ ತೊಡಿಸಬೇಕು ಎಂದು ಸುಪ್ರೀಂ ಕೋರ್ಟ್ಆದೇಶವಿದೆ. ಆದರೂ ಪೊಲೀಸರ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ವೈದ್ಯರು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com