ಮತದಾನ ಮುಕ್ತಾಯ: ಮತದಾರರಿಗೆ ರಾಹುಲ್ ಗಾಂಧಿ ಧನ್ಯವಾದ, 'ಉತ್ತಮ' ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕರಿಗೆ ಶ್ಲಾಘನೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬುಧವಾರ ಸಂಜೆ ಮತದಾನ ಮುಕ್ತಾಯವಾಗುತ್ತಿದ್ದಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬುಧವಾರ ಸಂಜೆ ಮತದಾನ ಮುಕ್ತಾಯವಾಗುತ್ತಿದ್ದಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. 

'ಉತ್ತಮವಾದ, ಘನತೆ ಮತ್ತು ಜನಪರ ಪ್ರಚಾರ' ಮಾಡಿದ್ದಕ್ಕಾಗಿ ಪಕ್ಷದ ನಾಯಕರನ್ನೂ ಶ್ಲಾಘಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. 

'ನಾನು ಕಾರ್ಯಕರ್ತರಿಗೆ ಮತ್ತು ಉತ್ತಮವಾದ, ಘನತೆ ಮತ್ತು ಜನಾಧಾರಿತ ಪ್ರಚಾರ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಪ್ರಗತಿಪರ ಭವಿಷ್ಯಕ್ಕಾಗಿ ಮತ ಹಾಕಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಕ್ಕಾಗಿ ಕರ್ನಾಟಕದ ಜನತೆಗೆ ಧನ್ಯವಾದಗಳು' ಎಂದು ಟ್ವೀಟ್ ಮಾಡಿದ್ದಾರೆ.

224 ಸದಸ್ಯ ಬಲದ ವಿಧಾನಸಭೆಗೆ ನಡೆದ ಮತದಾನದ ಅಂಕಿ ಅಂಶದ ಪ್ರಕಾರ, ರಾಮನಗರದಲ್ಲಿ ಅತಿ ಹೆಚ್ಚು ಅಂದರೆ ಶೇ 78.22 ರಷ್ಟು ಮತದಾನವಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇ 48.63 ರಷ್ಟು ಕಡಿಮೆ ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯವು ಮುಖ್ಯವಾಗಿ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ನೇತೃತ್ವದ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಿದೆ. 

ಒಟ್ಟು 5.31 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದರು. ಚುನಾವಣಾ ಆಯೋಗವು ರಾಜ್ಯದಾದ್ಯಂತ 58,545 ಮತಗಟ್ಟೆಗಳನ್ನು ಸ್ಥಾಪಿಸಿದ್ದು, 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com