ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್‌ ಭೂಷಣ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ಹೇಳಿಕೆ ದಾಖಲು

ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಅಪ್ರಾಪ್ತ ಮಹಿಳಾ ಕುಸ್ತಿಪಟು ಗುರುವಾರ ಮ್ಯಾಜಿಸ್ಟ್ರೇಟ್ ಮುಂದೆ ತಮ್ಮ ಹೇಳಿಕೆ...
ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್
ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್

ನವದೆಹಲಿ: ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಅಪ್ರಾಪ್ತ ಮಹಿಳಾ ಕುಸ್ತಿಪಟು ಗುರುವಾರ ಮ್ಯಾಜಿಸ್ಟ್ರೇಟ್ ಮುಂದೆ ತಮ್ಮ ಹೇಳಿಕೆ ದಾಖಲಿಸಿದ್ದಾರೆ.

ಸಿಆರ್ ಪಿಸಿ 164 ಅಡಿಯಲ್ಲಿ ಅಪ್ರಾಪ್ತ ಕುಸ್ತಿಪಟುವಿನ ಹೇಳಿಕೆ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದೂರುದಾರೆ, ಅಪ್ರಾಪ್ತ ಕುಸ್ತಿಪಟು ಭಾಗವಹಿಸಿದ್ದ ಪಂದ್ಯಾವಳಿಗಳ ಕೆಲವು ದಾಖಲೆಗಳು ಮತ್ತು ವಿವರಗಳನ್ನು ನೀಡುವಂತೆ ಡಬ್ಲ್ಯುಎಫ್‌ಐಗೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ಬ್ರಿಜ್ ಭೂಷಣ್ ಸಹ ಭಾಗವಹಿಸಿದ್ದ ಪಂದ್ಯಾವಳಿಗಳಲ್ಲಿ ಲೈಂಗಿಕ ಕಿರುಕುಳದ ಕೆಲವು ಘಟನೆಗಳು ಸಂಭವಿಸಿವೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com