ಡಬ್ಲ್ಯೂಎಫ್ ಐ ಮುಖ್ಯಸ್ಥನ ಹೇಳಿಕೆ ದಾಖಲಿಸಿಕೊಂಡ ದೆಹಲಿ ಪೊಲೀಸರು
ನವದೆಹಲಿ: ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿಕೆಯನ್ನು ದಾಖಲಿಸಿಕೊಂಡಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಶರಣ್ ಸಿಂಗ್ ಅವರಿಂದ ಕೆಲವು ದಾಖಲೆಗಳನ್ನು ಕೇಳಲಾಗಿದ್ದು, ಅವರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ವರು ಮಹಿಳಾ ಪೊಲೀಸ್ ಅಧಿಕಾರಿಗಳು ಸೇರಿದಂತೆ ಆರು ಪೊಲೀಸ್ ತಂಡಗಳೊಂದಿಗೆ ಎಸ್‌ಐಟಿ ರಚಿಸಲಾಗಿದೆ. ಮಹಿಳಾ ಡಿಸಿಪಿ ನೇತೃತ್ವದಲ್ಲಿ 10 ಜನರ ತಂಡ ರಚಿಸಲಾಗಿತ್ತು. ಡಬ್ಲ್ಯುಎಫ್‌ಐ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರ ಹೇಳಿಕೆಗಳನ್ನೂ ಸಹ ದಾಖಲಿಸಲಾಗಿದೆ. ದೆಹಲಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ವಿನೋದ್ ತೋಮರ್ ಕೂಡ ಆರೋಪಿಯಾಗಿದ್ದಾರೆ.
ಬ್ರಿಜ್ ಭೂಷಣ್ ಅವರ ಸ್ಪಷ್ಟೀಕರಣಕ್ಕಾಗಿ ಕೆಲವು ವಿಡಿಯೋ ಸಾಕ್ಷ್ಯಗಳು ಮತ್ತು ಮೊಬೈಲ್ ಡೇಟಾವನ್ನು ಸಂಗ್ರಹಿಸಲು ಸೂಚಿಸಲಾಗಿದೆ. ಎಸ್ಐಟಿ ಬ್ರಿಜ್ ಭೂಷಣ್ ಅವರನ್ನು ಮತ್ತಷ್ಟು ವಿಚಾರಣೆ ನಡೆಸಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಸ್ತಿಪಟುಗಳ ದೂರಿನ ಮೇರೆಗೆ ದೆಹಲಿ ಪೊಲೀಸ್ ತಂಡಗಳು ಉತ್ತರ ಪ್ರದೇಶ, ಜಾರ್ಖಂಡ್, ಕರ್ನಾಟಕ ಮತ್ತು ಹರಿಯಾಣಕ್ಕೆ ತೆರಳಿ ಸಾಕ್ಷ್ಯಗಳನ್ನು ಸಂಗ್ರಹಿಸಿವೆ. "ದೇಶದ ಹೊರಗಡೆಯೂ ಆರೋಪ ಕೇಳಿಬಂದಿದ್ದು ದೆಹಲಿ ಪೊಲೀಸರು ಸಂಬಂಧಪಟ್ಟ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ