ಚುನಾವಣೆ ಸಮೀಪದಲ್ಲಿ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು: ರಾಜ್ಯ ಉಸ್ತುವಾರಿ ನೇತೃತ್ವದಲ್ಲಿ ಸಭೆ

ಚುನಾವಣೆ ಹೊತ್ತಲ್ಲೇ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಉದ್ಬವಿಸಿದ್ದು, ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಸುಖಜೀಂದರ್ ಸಿಂಗ್ ರಾಂಧವಾ ಇಂದು ರಾಜ್ಯದ ಪಕ್ಷದ ಎಲ್ಲಾ ಸಹ-ಪ್ರಭಾರಿಗಳ ಸಭೆಯನ್ನು ಕರೆದಿದ್ದಾರೆ.
ಸಚಿನ್ ಪೈಲಟ್
ಸಚಿನ್ ಪೈಲಟ್

ಜೈಪುರ: ಚುನಾವಣೆ ಹೊತ್ತಲ್ಲೇ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಉದ್ಬವಿಸಿದ್ದು, ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಸುಖಜೀಂದರ್ ಸಿಂಗ್ ರಾಂಧವಾ ಇಂದು ರಾಜ್ಯದ ಪಕ್ಷದ ಎಲ್ಲಾ ಸಹ-ಪ್ರಭಾರಿಗಳ ಸಭೆಯನ್ನು ಕರೆದಿದ್ದಾರೆ. ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

2020ರಲ್ಲಿ ತಮ್ಮ ಸರ್ಕಾರ ಉಳಿಸಲು ಹಿಂದಿನ ಮುಖ್ಯಮಂತ್ರಿ ವಸುಂಧರಾ ರಾಜೇ ನೆರವು ನೀಡಿದ್ದರು ಎಂಬ ಹಾಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇತ್ತೀಚಿಗೆ ನೀಡಿರುವ ಹೇಳಿಕೆಯಿಂದ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಉಂಟಾಗಿರುವ ಹೊಸ ಬಿಕ್ಕಟ್ಟಿನ ನಡುವೆ ಈ ಸಭೆ ನಡೆಸಲಾಗುತ್ತಿದೆ.

ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ 'ರಾಜಸ್ಥಾನ ಸರ್ಕಾರದ ನಿಷ್ಕ್ರಿಯತೆ' ವಿರುದ್ಧ ಸಚಿನ್ ಪೈಲಟ್ ಜನ ಸಂಘರ್ಷ ಯಾತ್ರೆ  ಆರಂಭಿಸಿದ್ದಾರೆ. ಐದು ದಿನಗಳ ಜನಸಂಘರ್ಷ ಯಾತ್ರೆ ಗುರುವಾರ ಅಜ್ಮೀರ್‌ನಿಂದ ಪ್ರಾರಂಭವಾಯಿತು ಮತ್ತು ಜೈಪುರದಲ್ಲಿ ಮುಕ್ತಾಯಗೊಳ್ಳಲಿದೆ.

ಪಕ್ಷದ ಹೈಕಮಾಂಡ್ ಎಚ್ಚರಿಕೆ ನೀಡಿದರೂ  ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ತನಿಖೆ ನಡೆಸುವಂತೆ ಸಚಿನ್ ಪೈಲಟ್ ಪೈಲಟ್ ಕಳೆದ ತಿಂಗಳು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ್ದರು. 

ಗೆಹ್ಲೋಟ್ ಮತ್ತು ಪೈಲಟ್ ನಡುವೆ ಹಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯವಿದೆ. ಹೈಕಮಾಂಡ್ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸುವ ಮೊದಲು ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ಚುನಾವಣೆ ನಡೆಯಲಿದ್ದು, ಗೆಹ್ಲೋಟ್ ಮತ್ತು ಪೈಲಟ್ ನಡುವಿನ ಇತ್ತೀಚಿನ ವಾಕ್ಸಮರ ಕಾಂಗ್ರೆಸ್‌ ಆತಂಕಕ್ಕೆ ಕಾರಣವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com