ಕೇರಳ ಸ್ಟೋರಿ ನಿಷೇಧ: ಪಶ್ಚಿಮ ಬಂಗಾಳಕ್ಕೆ ಸುಪ್ರೀಂ ಕೋರ್ಟ್ ನೊಟೀಸ್

ಕೇರಳ ಸ್ಟೋರಿ ನಿಷೇಧಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಕೇರಳ ಸ್ಟೋರಿ ನಿಷೇಧಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. 

ರಾಜ್ಯದಲ್ಲಿ ಚಿತ್ರವನ್ನು ನಿಷೇಧಿಸಿರುವುದನ್ನು ಪ್ರಶ್ನಿಸಿ ಸಿನಿಮಾ ತಂಡ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟ್ ಇದೇ ವೇಳೆ ಸಿನಿಮಾ ನಿಷೇಧಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯ ಸರ್ಕಾರಕ್ಕೂ ನೊಟೀಸ್ ಜಾರಿಗೊಳಿಸಿದೆ. ಸುದಿಪ್ತೋ ಸೇನ್ ನಿರ್ದೇಶಿಸಿರುವ ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಕೇರಳದಿಂದ ಇಸ್ಲಾಮಿಗೆ ಮತಾಂತರಗೊಂಡು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಗುಂಪಿನಿಂದ ನೇಮಕಗೊಂಡ ಮಹಿಳೆಯರ ಕಥೆ ಹೊಂದಿರುವ ಚಿತ್ರ ಮೇ 5 ರಂದು ಬಿಡುಗಡೆಯಾಗಿತ್ತು.

ಪಶ್ಚಿಮ ಬಂಗಾಳದ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ನಿರ್ಮಾಪಕ ವಿಪು ಶಾ ಹೇಳಿದ್ದಾರೆ. ವಿಪಕ್ಷಗಳು ಬಯಲಾಗುತ್ತಿವೆ. ಅವರು ವೋಟ್ ಬ್ಯಾಂಕ್ ರಾಜಕಾರಣ, ತುಷ್ಟೀಕರಣದಲ್ಲಿ ತೊಡಗಿದ್ದಾರೆ. ಸಿನಿಮಾವನ್ನು ನಿಷೇಧಿಸುವ ಮೂಲಕ ಪಶ್ಚಿಮ ಬಂಗಾಳ ಅನ್ಯಾಯವನ್ನು ಮಾಡುತ್ತಿದೆ. ಇತ್ತೀಚೆಗಷ್ಟೇ ಬಂಗಾಳದಲ್ಲಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿದೆ... ಇಂತಹ ಭಯೋತ್ಪಾದಕರ ಪರವಾಗಿ ನಿಲ್ಲುವ ಮೂಲಕ ನೀವು (ಮಮತಾ ಬ್ಯಾನರ್ಜಿ) ಏನು ಪಡೆಯುತ್ತಿದ್ದೀರಿ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com