ವಿಡಿಯೋ: ಗುರುಗ್ರಾಮದಲ್ಲಿ ಭೀಕರ ಅಪಘಾತ: ಮರಕ್ಕೆ ಢಿಕ್ಕಿಯಾಗಿ ದುಬಾರಿ ಪಾರ್ಷ್ ಕಾರಿಗೆ ಬೆಂಕಿ

ದೆಹಲಿ ಸಮೀಪದ ಗುರುಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ದುಬಾರಿ ಪಾರ್ಷ್ ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಮರಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು
ಮರಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು
Updated on: 

ನವದೆಹಲಿ: ದೆಹಲಿ ಸಮೀಪದ ಗುರುಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ದುಬಾರಿ ಪಾರ್ಷ್ ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಮೂಲಗಳ ಪ್ರಕಾರ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಪೋರ್ಷ್ ಕಾರು ಮರಕ್ಕೆ ಢಿಕ್ಕಿ ಹೊಡೆದಿದ್ದು, ಕಾರು ಪಲ್ಟಿಯಾಗಿ ಮೇಲಕ್ಕೆ ಚಿಮ್ಮಿದೆ. ಇಂದು ಬೆಳಗಿನ ಜಾವ 4 ಗಂಟೆಗೆ ಈ ಅವಘಡ ಸಂಭವಿಸಿದ್ದು, ವೇಗವಾಗಿ ಬಂದ ಪೋರ್ಷ್ ಕಾರು ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದೆ ಎಂದು ಹೇಳಲಾಗುತ್ತಿದೆ.

ಕಾರಿನ ವೇಗವು ತುಂಬಾ ಹೆಚ್ಚಿತ್ತು, ಇದರಿಂದಾಗಿ ಚಾಲಕನಿಗೆ ನಿಭಾಯಿಸಲು ಅವಕಾಶ ಸಿಗಲಿಲ್ಲ.. ಅಪಘಾತದ ನಂತರ, ಕಾರು ಬೆಂಕಿಯ ಉಂಡೆಯಾಗಿ ಮಾರ್ಪಟ್ಟಿತ್ತು. ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಗುರುವಾರ ಮುಂಜಾನೆ ಪೋರ್ಷ್ ಕಾರೊಂದು ಅತಿ ವೇಗದಲ್ಲಿ ಬರುತ್ತಿತ್ತು. ಗಾಲ್ಫ್ ಮೈದಾನಕ್ಕೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ನಂತರ ಕಾರು ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಆದರೆ, ಕಾರಿಗೆ ಬೆಂಕಿ ಹೊತ್ತಿಕೊಳ್ಳುವ ಮುನ್ನವೇ ಚಾಲಕ ಕಾರಿನಿಂದ ಇಳಿದಿದ್ದಾನೆ. ಇದರಿಂದಾಗಿ ಆತನ ಪ್ರಾಣ ಉಳಿಯಿತು. ಬೆಂಕಿ ಎಷ್ಟು ಭೀಕರವಾಗಿತ್ತೆಂದರೆ ಸ್ವಲ್ಪ ಹೊತ್ತಿನಲ್ಲೇ ಕಾರು ಸುಟ್ಟು ಬೂದಿಯಾಯಿತು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com