ಸಿಐಎಸ್ ಸಿಇ 10, 12ನೇ ತರಗತಿ ಫಲಿತಾಂಶ ಪ್ರಕಟ

ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್(ಸಿಐಎಸ್‌ಸಿಇ) ಭಾನುವಾರ ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್(ಐಸಿಎಸ್‌ಇ 10ನೇ ತರಗತಿ) ಮತ್ತು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ಐಎಸ್‌ಸಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್(ಸಿಐಎಸ್‌ಸಿಇ) ಭಾನುವಾರ ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್(ಐಸಿಎಸ್‌ಇ 10ನೇ ತರಗತಿ) ಮತ್ತು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ಐಎಸ್‌ಸಿ 12ನೇ ತರಗತಿ) ಫಲಿತಾಂಶ ಪ್ರಕಟಿಸಿದೆ.

ವಿದ್ಯಾರ್ಥಿಗಳು CISCE ವೆಬ್‌ಸೈಟ್‌ http://cisce.org ಅಥವಾ http://results.cisce.org ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

ಐಸಿಎಸ್ಇ 10ನೇ ತರಗತಿ ಪರೀಕ್ಷೆಗಳು ಫೆಬ್ರವರಿ 27 ರಂದು ಪ್ರಾರಂಭವಾಗಿ ಮಾರ್ಚ್ 29, 2023 ರಂದು ಮುಕ್ತಾಯಗೊಂಡಿದ್ದವು.

ISC 12ನೇ ತರಗತಿ ಪರೀಕ್ಷೆಯು ಫೆಬ್ರವರಿ 13 ರಂದು ಪ್ರಾರಂಭವಾಗಿ ಮಾರ್ಚ್ 31ಕ್ಕೆ ಕೊನೆಯ ಪರೀಕ್ಷೆ ನಡೆದಿತ್ತು.

ಈ ವರ್ಷ ಸುಮಾರು 2.5 ಲಕ್ಷ ವಿದ್ಯಾರ್ಥಿಗಳು 10, 12ನೇ ತರಗತಿಯ CISCE ಪರೀಕ್ಷೆಗೆ ಹಾಜರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com