ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ: ಆರು ಮಹಿಳೆಯರ ದಾರುಣ ಸಾವು, ನಾಲ್ವರಿಗೆ ಗಂಭೀರ ಗಾಯ

ಆಟೋರಿಕ್ಷಾಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ  ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಆಂಧ್ರಪ್ರದೇಶ: ಆಟೋರಿಕ್ಷಾಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ  ನಡೆದಿದೆ.

ಘಟನೆಯಲ್ಲಿ ಇನ್ನೂ ನಾಲ್ವರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾಕಿನಾಡ ಸರ್ಕಾರಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಕಾಕಿನಾಡ ಜಿಲ್ಲೆಯ ತಲ್ಲರೇವು ಮಂಡಲದ ಸೀತಾರಾಮಪುರಂ ಬಳಿ ರಾಷ್ಟ್ರೀಯ ಹೆದ್ದಾರಿ 216ರಲ್ಲಿ ಅಪಘಾತ ಸಂಭವಿಸಿದೆ.

ಸಂತ್ರಸ್ತರು ಯಾನಂ ಪಟ್ಟಣದ ನೀಲಪಲ್ಲಿಯವರು. ಅವರೆಲ್ಲರೂ ಸೀಗಡಿ ಘಟಕದ ಉದ್ಯೋಗಿಗಳಾಗಿದ್ದರು. ಪೊಲೀಸರ ಪ್ರಕಾರ, ಅವರು ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಅಪಘಾತ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಪಘಾತ ಹೇಗೆ ಸಂಭವಿಸಿತು ಎಂಬುದನ್ನು ಪತ್ತೆ ಹಚ್ಚುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com