ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು: ಕೇರಳ ಪೊಲೀಸರಿಂದ ತೀವ್ರ ತನಿಖೆ

ಕೇರಳ ರಾಜಧಾನಿ ತಿರುವನಂತಪುರಂನಲ್ಲಿನ ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ತಿರುವನಂತಪುರಂ: ಕೇರಳ ರಾಜಧಾನಿ ತಿರುವನಂತಪುರಂನಲ್ಲಿನ ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ತಿರುವನಂತಪುರಂನ ಮುಸ್ಲಿಂ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭೀಮಪಲ್ಲಿ ಮೂಲದ 17 ವರ್ಷದ ಬಾಲಕಿ ಶನಿವಾರ ಬಲರಾಮಪುರಂನಲ್ಲಿರುವ ಮುಸ್ಲಿಂ ಧಾರ್ಮಿಕ ಸಂಸ್ಥೆಯ ಗ್ರಂಥಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳು ಎಂದು ಪೊಲೀಸರು ತಿಳಿಸಿದ್ದಾರೆ.

ಅನುಮಾನಾಸ್ಪದ ಸಾವು ಎಂದು ಆರೋಪಿಸಿ ಬಾಲಕಿಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಸಿಆರ್‌ಪಿಸಿಯ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಸ್ಥೆಯಲ್ಲಿ ತಾನು ಎದುರಿಸುತ್ತಿರುವ ಮಾನಸಿಕ ಕಿರುಕುಳದ ಬಗ್ಗೆ ಬಾಲಕಿ ಈ ಹಿಂದೆ ತನ್ನ ಕುಟುಂಬಕ್ಕೆ ದೂರು ನೀಡಿದ್ದಳು. ಶನಿವಾರ, ಅವಳು ತನ್ನ ತಾಯಿಗೆ ಕರೆ ಮಾಡಿ ತನ್ನನ್ನು ಕರೆದುಕೊಂಡು ಹೋಗುವಂತೆ ಹೇಳಿದ್ದಳು. ಆದರೆ ಮಾರನೇಯ ದಿನವೇ ಆಕೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com