ದುಬೈ-ಅಮೃತಸರ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಗಗನಸಖಿಗೆ ಕಿರುಕುಳ; ಪ್ರಯಾಣಿಕನ ಬಂಧನ
ಅಮೃತಸರ: ದುಬೈ-ಅಮೃತಸರ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಗಗನಸಖಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪುರುಷ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪಂಜಾಬ್‌ನ ಜಲಂಧರ್‌ನ ಕೋಟ್ಲಿ ಗ್ರಾಮದವರಾದ ರಾಜಿಂದರ್ ಸಿಂಗ್ ಎಂಬುವವರು ಶನಿವಾರ ಗಗನಸಖಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ದಾರೆ ಮತ್ತು ಆಕೆಗೆ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯನ್ನು ಗಗನಸಖಿ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ನಂತರ ಸಿಬ್ಬಂದಿ ಅಮೃತಸರ ನಿಯಂತ್ರಣ ಕೊಠಡಿಗೆ ವಿಷಯ ತಿಳಿಸಿದ್ದಾರೆ ಮತ್ತು ಏರ್‌ಲೈನ್‌ನ ಸಹಾಯಕ ಭದ್ರತಾ ವ್ಯವಸ್ಥಾಪಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಕುಡಿದ ಅಮಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಶ್ರೀ ಗುರು ರಾಮದಾಸ್ ಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಆರೋಪಿಯನ್ನು ಬಂಧಿಸಲಾಯಿತು ಎಂದು ಅವರು ತಿಳಿಸಿದ್ದಾರೆ.
ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ) ಮತ್ತು ಸೆಕ್ಷನ್ 509 (ಪದ, ಸನ್ನೆ ಅಥವಾ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ