ಈ ತಿಂಗಳ ಅಂತ್ಯಕ್ಕೆ ಹೊಸ ಸಂಸತ್ ಭವನ ಲೋಕಾರ್ಪಣೆ ಸಾಧ್ಯತೆ

ನೂತನ ಸಂಸತ್ ಭವನಕ್ಕೆ ಅಂತಿಮ ಸ್ಪರ್ಶ ನೀಡಲಾಗುತ್ತಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಸಿದ್ಧಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಹೊಸ ಸಂಸತ್ ಭವನ
ಹೊಸ ಸಂಸತ್ ಭವನ
Updated on

ನವದೆಹಲಿ: ನೂತನ ಸಂಸತ್ ಭವನಕ್ಕೆ ಅಂತಿಮ ಸ್ಪರ್ಶ ನೀಡಲಾಗುತ್ತಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಸಿದ್ಧಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಅವರ ಪ್ರಕಾರ, ಸಿವಿಲ್ ಕಟ್ಟಡಗಳ ಸ್ವಚ್ಛತೆ ಪ್ರಾರಂಭವಾಗಿದೆ ಮತ್ತು ಹೊಸ ಕಟ್ಟಡದ ಉದ್ಘಾಟನೆಯ ಬಗ್ಗೆ ಇನ್ನೂ ಸರ್ಕಾರದಿಂದ ಯಾವುದೇ ಮಾಹಿತಿ ಇಲ್ಲ. ಎರಡು ವರ್ಷಗಳ ಹಿಂದೆ ನೂತನ ಸಂಸತ್ ಭವನದ ನಿರ್ಮಾಣ ಕಾರ್ಯ ಆರಂಭವಾಗಿತ್ತು.

ಸೆಂಟ್ರಲ್‌ ವಿಸ್ತಾ ಯೋಜನೆ ಭಾಗವಾಗಿ ಹೊಸ ಸಂಸತ್‌ ಭವನವನ್ನು ನಿರ್ಮಿಸಲಾಗುತ್ತಿದೆ. ತ್ರಿಕೋನಾಕಾರದ ಸಂಸತ್‌ ಭವನ ಇದಾಗಿದೆ. ಕಟ್ಟಡ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಕಟ್ಟಡದ ಒಳಾಂಗಣ ವಿನ್ಯಾಸದ ಕೆಲಸಗಳು ನಡೆಯುತ್ತಿವೆ.

ಸುಮಾರು 1,200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,224 ಸಂಸದರು ಕುಳಿತುಕೊಳ್ಳಲು ಅವಕಾಶವಿದೆ. 

ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2020 ರಲ್ಲಿ ಈ ಹೊಸ ಸಂಸತ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಸರ್ಕಾರ ಕಳೆದ ವರ್ಷದ ನವೆಂಬರ್‌ ಒಳಗಡೆ ಕಾಮಗಾರಿ ಮುಕ್ತಾಯಗೊಳಿಸುವ ಗುರಿಯನ್ನು ನಿಗದಿ ಪಡಿಸಿತ್ತು. ಆದರೆ ಕೋವಿಡ್‌ ಮತ್ತು ಇತರೆ ಕೆಲ ಸಮಸ್ಯೆಗಳಿಂದಾಗಿ ಡೆಡ್‌ಲೈನ್‌ ವಿಸ್ತರಣೆಯಾಗಿ ಈಗ ಉದ್ಘಾಟನೆಯ ಹಂತಕ್ಕೆ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com