ದೆಹಲಿ ಶಾಲೆಗೆ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು

ರಾಷ್ಟ್ರ ರಾಜಧಾನಿ ನವದೆಹಲಿಯ ಖಾಸಗಿ ಶಾಲೆಯೊಂದಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಉಪ ಪೊಲೀಸ್ ಆಯುಕ್ತ, ದಕ್ಷಿಣ ದೆಹಲಿ, ಚಂದನ್ ಚೌಧರಿ.
ಉಪ ಪೊಲೀಸ್ ಆಯುಕ್ತ, ದಕ್ಷಿಣ ದೆಹಲಿ, ಚಂದನ್ ಚೌಧರಿ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಖಾಸಗಿ ಶಾಲೆಯೊಂದಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.

ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಗೆ ಬೆಳಿಗ್ಗೆ 6.35 ರ ಸುಮಾರಿಗೆ ಬೆದರಿಕೆ ಮೇಲ್ ಬಂದಿದ್ದು, ಕೂಡಲೇ ಶಾಲಾ ಆಡಳಿತ ಮಂಡಳಿಯು ಪೊಲೀಸರಿಗೆ ಮಾಹಿತಿ ನೀಡಿದೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದೊಂದಿದೆ ದೌಡಾಯಿಸಿದ್ದು, ಶೋಧನಾ ಕಾರ್ಯ ನಡೆಸಿದ್ದಾರೆ. ಆದರೆ, ಈ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮಥುರಾ ರಸ್ತೆಯಲ್ಲಿರುವ ‘ದಿ ಡೆಲ್ಲಿ ಪಬ್ಲಿಕ್ ಸ್ಕೂಲ್’ (ಡಿಪಿಎಸ್) ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಮೇಲ್ ಬಂದಿತ್ತು. ಇದಾದ ಹದಿನೈದು ದಿನಗಳ ಬಳಿಕ ಮತ್ತೊಂದು ಶಾಲೆಗೆ ಬೆದರಿಕೆ ಮೇಲ್ ಬಂದಿದೆ.

ಕಳೆದ ತಿಂಗಳು ಕೂಡ ‘ದಿ ಇಂಡಿಯನ್ ಸ್ಕೂಲ್’ ನಲ್ಲಿ ಇದೇ ರೀತಿಯ ಘಟನೆ ವರದಿಯಾಗಿತ್ತು. ಬಾಂಬ್ ಸ್ಕ್ವಾಡ್ ಮತ್ತು ಇತರ ಏಜೆನ್ಸಿಗಳು ಸ್ಫೋಟಕ ವಸ್ತುವಿಗಾಗಿ ಶಾಲಾ ಆವರಣದಲ್ಲಿ ಶೋಧನೆ ನಡೆಸಿತ್ತು. ಆದರೆ, ನಂತರ ಬೆದರಿಕೆ ಮೇಲ್ ಆಗಿತ್ತು ಎಂಬುದು ತಿಳಿದುಬಂದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com