ಮಲ್ಲಿಕಾರ್ಜುನ ಖರ್ಗೆ- ರಾಹುಲ್ ಗಾಂಧಿ ಭೇಟಿ; ಕರ್ನಾಟಕದಲ್ಲಿ ಸರ್ಕಾರ ರಚನೆ ಕುರಿತು ಮಹತ್ವದ ಚರ್ಚೆ

ಕರ್ನಾಟಕ ಮುಖ್ಯಮಂತ್ರಿ ಸ್ಥಾನದ ತೀವ್ರ ಪೈಪೋಟಿಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು ಮತ್ತು ದಕ್ಷಿಣದ ರಾಜ್ಯದಲ್ಲಿ ಸರ್ಕಾರ ರಚನೆಯ ಕುರಿತು ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಬಳ್ಳಾರಿಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಮಲ್ಲಿಕಾರ್ಜುನ ಖರ್ಗೆ- ರಾಹುಲ್ ಗಾಂಧಿ
ಬಳ್ಳಾರಿಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಮಲ್ಲಿಕಾರ್ಜುನ ಖರ್ಗೆ- ರಾಹುಲ್ ಗಾಂಧಿ

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸ್ಥಾನದ ತೀವ್ರ ಪೈಪೋಟಿಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು ಮತ್ತು ದಕ್ಷಿಣದ ರಾಜ್ಯದಲ್ಲಿ ಸರ್ಕಾರ ರಚನೆಯ ಕುರಿತು ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಖರ್ಗೆ ಅವರ ನಿವಾಸಕ್ಕೆ ತೆರಳಿದ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮುಖ್ಯಸ್ಥರೊಂದಿಗೆ ಗುಪ್ತವಾಗಿ ಸಭೆ ನಡೆಸಿದರು.
ಕರ್ನಾಟಕದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕದ ಪಕ್ಷದ ನಾಯಕರು ಮತ್ತು ಭಾನುವಾರ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಮೇಲ್ವಿಚಾರಣೆಗಾಗಿ ಅವರು ನೇಮಿಸಿದ ಮೂವರು ವೀಕ್ಷಕರೊಂದಿಗೂ ಮಲ್ಲಿಕಾರ್ಜುನ ಖರ್ಗೆ ಅವರು ಚರ್ಚೆ ನಡೆಸಿದ್ದಾರೆ.

ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿದ್ದು, ಇಬ್ಬರೂ ಲಾಬಿ ಮಾಡುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿರುವಾಗ, ಆರೋಗ್ಯ ಸಮಸ್ಯೆಗಳಿಂದಾಗಿ ಡಿಕೆ ಶಿವಕುಮಾರ್ ಅವರು ಸೋಮವಾರ ಸಂಜೆಯ ತಮ್ಮ ದೆಹಲಿ ಭೇಟಿಯನ್ನು ರದ್ದುಗೊಳಿಸಿದರು. ಇದು ಪಕ್ಷದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.

ಶಿವಕುಮಾರ್ ಮಂಗಳವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿಗೆ ಆಗಮಿಸಿದರು. ದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು ಮತ್ತು ಸುದ್ದಿಗಾರರ ಪ್ರಶ್ನೆಗಳ ಸುರಿಮಳೆಗೈದು ಕೈ ಜೋಡಿಸಿ ಹೊರನಡೆದರು.

ಕರ್ನಾಟಕದಲ್ಲಿ ಸರ್ಕಾರ ರಚನೆ ಕುರಿತು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಂದು ಚರ್ಚೆ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದರೆ, ಆಡಳಿತಾರೂಢ ಬಿಜೆಪಿ ಮತ್ತು ಜೆಡಿಎಸ್ ಕ್ರಮವಾಗಿ 66 ಮತ್ತು 19 ಸ್ಥಾನಗಳನ್ನು ಪಡೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com