ಪಾಕ್‌ನೊಂದಿಗೆ ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿ ಹಂಚಿಕೆ; ಪತ್ರಕರ್ತ, ನೌಕಾಪಡೆಯ ಮಾಜಿ ಕಮಾಂಡರ್ ಬಂಧಿಸಿದ ಸಿಬಿಐ
ನವೆದೆಹಲಿ: ರಕ್ಷಣಾ ವಿಷಯಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿ ವಿದೇಶಿ ಗುಪ್ತಚರ ಸಂಸ್ಥೆಗಳಿಗೆ ರವಾನಿಸಿದ ಆರೋಪದ ಮೇಲೆ ಅರೆಕಾಲಿಕ ಪತ್ರಕರ್ತ ಮತ್ತು ಮಾಜಿ ನೌಕಾಪಡೆಯ ಕಮಾಂಡರ್ ಅನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ವಿವೇಕ್ ರಘುವಂಶಿ ವಿರುದ್ಧ ಎಫ್‌ಐಆರ್ ನಂತರ, ಸಿಬಿಐ ಮಂಗಳವಾರ ರಕ್ಷಣಾ ಮತ್ತು ಕಾರ್ಯತಂತ್ರದ ವ್ಯವಹಾರಗಳ ಕುರಿತಾದ ಯುಎಸ್ ಮೂಲದ ಪೋರ್ಟಲ್‌ನಲ್ಲಿ ಭಾರತದ ವರದಿಗಾರ ಎಂದು ಪಟ್ಟಿಮಾಡಲಾದ ಅರೆಕಾಲಿಕ ಪತ್ರಕರ್ತನಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಮತ್ತು ಜೈಪುರ ಮತ್ತು ದೆಹಲಿಯ 12 ಸ್ಥಳಗಳಲ್ಲಿ ಶೋಧ ನಡೆಸಿತು ಎಂದಿದ್ದಾರೆ.
ಸಂಸ್ಥೆಯು ರಘುವಂಶಿ ಮತ್ತು ಮಾಜಿ ನೌಕಾಪಡೆಯ ಕಮಾಂಡರ್ ಆಶಿಶ್ ಪಾಠಕ್ ವಿರುದ್ಧ ಅಧಿಕೃತ ರಹಸ್ಯ ಕಾಯಿದೆಯ ಸೆಕ್ಷನ್ 3 (ಗೂಢಚಾರಿಕೆ) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಅಪರಾಧದ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
ಶೋಧ ಕಾರ್ಯಾಚರಣೆಯ ಸಮಯದಲ್ಲಿ ಹಲವಾರು ಸೂಕ್ಷ್ಮ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಕಾನೂನು ಪರಿಶೀಲನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ