ಕರ್ನಾಟಕ ಗೆದ್ದಾಕ್ಷಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದರ್ಥವಲ್ಲ: ಪ್ರಶಾಂತ್ ಕಿಶೋರ್

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ.. ಕರ್ನಾಟಕ ಗೆದ್ದಾಕ್ಷಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದರ್ಥವಲ್ಲ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಪ್ರಶಾಂತ್ ಕಿಶೋರ್
ಪ್ರಶಾಂತ್ ಕಿಶೋರ್
Updated on

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ.. ಕರ್ನಾಟಕ ಗೆದ್ದಾಕ್ಷಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದರ್ಥವಲ್ಲ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ ತನ್ನ ಸಾಧನೆಯ ಪೂರ್ವಭಾವಿಯಾಗಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿನ ವಿಜಯವನ್ನು ತಪ್ಪಾಗಿ ಗ್ರಹಿಸಬಾರದು ಎಂದು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.

IPAC ಸಂಸ್ಥಾಪಕರೂ ಕೂಡ ಆಗಿರುವ ಪ್ರಶಾಂತ್ ಕಿಶೋರ್ ತಮ್ಮ ತವರು ರಾಜ್ಯವಾದ ಬಿಹಾರದಲ್ಲಿ ಪ್ರಾರಂಭಿಸಿದ ರಾಜಕೀಯ ಅಭಿಯಾನವಾದ 'ಜನ್ ಸೂರಾಜ್' ಅವರ ಹೇಳಿಕೆಯನ್ನು ಹಂಚಿಕೊಂಡಿದ್ದು, 2013 ರ ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದರೂ ಸಹ ಅದು 2014 ರ ಸಂಸತ್ತಿನ ಚುನಾವಣೆಗಳಲ್ಲಿ ಬಿಜೆಪಿ ವಿರುದ್ಧ ಸೋಲು ಕಂಡಿತ್ತು. ಒಂದು ವರ್ಷದ ಹಿಂದೆ ಮೂರು ಪ್ರಮುಖ ರಾಜ್ಯಗಳಲ್ಲಿ ಗೆದ್ದ ನಂತರ 2019 ರ ಲೋಕಸಭಾ ಚುನಾವಣೆಯಲ್ಲಿ ಹಳೆಯ ಪಕ್ಷವು ಸೋತಿತ್ತು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ನ ಯಶಸ್ಸಿಗೆ ನಾನು ಅಭಿನಂದಿಸುತ್ತೇನೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಏನಿದೆ ಎಂಬುದರ ಸುಳಿವಿಗಾಗಿ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ತಪ್ಪಾಗಿ ಗ್ರಹಿಸದಂತೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಲು ನಾನು ಈ ಮೂಲಕ ಬಯಸುತ್ತೇನೆ" ಎಂದು ಕಿಶೋರ್ ಹೇಳಿದರು. 

'2012 ರಲ್ಲಿ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದನ್ನು ಸ್ಮರಿಸಬಹುದಾಗಿದೆ. ಎರಡು ವರ್ಷಗಳ ನಂತರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ರಾಜ್ಯದಲ್ಲಿ 80 ಸ್ಥಾನಗಳ ಪೈಕಿ 73 ಸ್ಥಾನಗಳನ್ನು ಗೆದ್ದುಕೊಂಡಿತು. ಅಂತೆಯೇ ಅವರು 2013 ರ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ನೆನಪಿಸಿಕೊಂಡಿದ್ದು, ಅಲ್ಲಿಯೂ ಕಾಂಗ್ರೆಸ್ ಬಹುಮತ ಗಳಿಸಿತು ಆದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ದಯನೀಯವಾಗಿ ಸೋತಿತು ಎಂದು ಅವರು ಗಮನಸೆಳೆದರು. 

"2018 ರ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ತನ್ನ ಯಶಸ್ಸನ್ನು ನೆನಪಿಟ್ಟುಕೊಳ್ಳುವುದು ಒಳ್ಳೆಯದು, ಅದರ ನಂತರ 2019 ರ ಲೋಕಸಭಾ ಚುನಾವಣೆಯಲ್ಲಿ ಈ ರಾಜ್ಯಗಳಲ್ಲಿ ಅದರ ಶೋಚನೀಯ ಪ್ರದರ್ಶನ ತೋರಿತು" ಎಂದು ಕಿಶೋರ್ ಹೇಳಿದರು.

45 ವರ್ಷ ವಯಸ್ಸಿನ ರಾಜಕೀಯ ವಿಶ್ಲೇಷಕ ನರೇಂದ್ರ ಮೋದಿ, ನಿತೀಶ್ ಕುಮಾರ್, ಅರವಿಂದ್ ಕೇಜ್ರಿವಾಲ್, ಎಂ ಕೆ ಸ್ಟಾಲಿನ್ ಮತ್ತು ಜಗನ್ಮೋಹನ್ ರೆಡ್ಡಿಯಂತಹ ವೈವಿಧ್ಯಮಯ ನಾಯಕರ ಚುನಾವಣಾ ಪ್ರಚಾರಗಳನ್ನು ನಿರ್ವಹಿಸಿದ್ದಾರೆ. ಎರಡು ದಿನಗಳ ಹಿಂದೆ ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡಿದ್ದ ಸಂದರ್ಭದಲ್ಲಿ ಪ್ರಶಾಂತ್ ಕಿಶೋರ್ ಸ್ನಾಯು ಸೆಳತಕ್ಕೆ ತುತ್ತಾಗಿದ್ದು, ಅಂದಿನಿಂದ ಅವರು ಅಜ್ಞಾತ ಸ್ಥಳದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com