ಗಾಜಿಪುರ: 2009 ರ ಕೊಲೆ ಯತ್ನ ಪ್ರಕರಣದಲ್ಲಿ ಉತ್ತರ ಪ್ರದೇಶದ ದರೋಡೆಕೋರ-ರಾಜಕಾರಣಿ ಮುಕ್ತಾರ್ ಅನ್ಸಾರಿ ಅವರನ್ನು ಗಾಜಿಪುರದ ನ್ಯಾಯಾಲಯ ಬುಧವಾರ ಖುಲಾಸೆಗೊಳಿಸಿದೆ.
ಮೊಹಮ್ಮದಾಬಾದ್ ಪೊಲೀಸ್ ಠಾಣೆಯ ಮೀರ್ ಹಸನ್ ಕೊಲೆ ಯತ್ನ(ಭಾರತೀಯ ದಂಡ ಸಂಹಿತೆ ಸೆಕ್ಷನ್ 307) ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಲಯ/ಮೊದಲ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶ ದುರ್ಗೇಶ್ ಅವರು ಆರೋಪಿ ಮುಕ್ತಾರ್ ಅನ್ಸಾರಿ ಅವರನ್ನು ಖುಲಾಸೆಗೊಳಿಸಿದ್ದಾರೆ ಎಂದು ಸರ್ಕಾರಿ ವಕೀಲ ನೀರಜ್ ಕುಮಾರ್ ಶ್ರೀವಾಸ್ತವ್ ಹೇಳಿದ್ದಾರೆ.
ಪ್ರಸ್ತುತ ಬಂಡಾ ಜೈಲಿನಲ್ಲಿರುವ ಅನ್ಸಾರಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಯಲ್ಲಿ ಭಾಗವಹಿಸಿದ್ದರು.
ಆದಾಗ್ಯೂ, ಅನ್ಸಾರಿಯು ಇತರ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿರುವುದರಿಂದ ಮತ್ತು ಇತ್ತೀಚೆಗೆ ಒಂದು ಪ್ರಕರಣದಲ್ಲಿ ಅಪರಾಧಿಯಾಗಿರುವ ಕಾರಣ ಅವರಿಗೆ ಬಿಡುಗಡೆ ಭಾಗ್ಯ ಇಲ್ಲ ಎಂದು ಶ್ರೀವಾಸ್ತವ್ ತಿಳಿಸಿದ್ದಾರೆ.
"2009 ರಲ್ಲಿ ಮೀರ್ ಹಸನ್ ಮೇಲೆ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿದ್ದರು. ದಾಳಿಕೋರರಲ್ಲಿ ಒಬ್ಬರಾದ ಸೋನು ಯಾದವ್ ನಂತರ ಹಸನ್‌ಗೆ ಬೆದರಿಕೆ ಹಾಕಿದ್ದರು ಮತ್ತು ಅನ್ಸಾರಿ ಅವರನ್ನು ಜೈಲಿನಲ್ಲಿ ಭೇಟಿಯಾಗುವಂತೆ ಹೇಳಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಯಾದವ್ ಮತ್ತು ಅನ್ಸಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು".
Advertisement