ರಾಜಸ್ಥಾನದಲ್ಲಿ ಸಚಿನ್ ಪೈಲಟ್, ಅಶೋಕ್ ಗೆಹ್ಲೋಟ್ ಬೆಂಬಲಿಗರ ಬಡಿದಾಟ! 

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಅವರ ವಿರೋಧಿ ಬಣದಲ್ಲಿರುವ ಸಚಿನ್ ಪೈಲಟ್ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದೆ.
ಸಚಿನ್ ಪೈಲಟ್
ಸಚಿನ್ ಪೈಲಟ್
Updated on

ಜೈಪುರ:  ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಅವರ ವಿರೋಧಿ ಬಣದಲ್ಲಿರುವ ಸಚಿನ್ ಪೈಲಟ್ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದೆ. ಅಜ್ಮೀರ್ ನಲ್ಲಿ ನಡೆದ ಕಾರ್ಯಕರ್ತರೊಂದಿಗಿನ ಪ್ರತಿಕ್ರಿಯೆ ಸಭೆಗೂ ಮುನ್ನ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಎಐಸಿಸಿಯ ರಾಜಸ್ಥಾನದ ಸಹ-ಪ್ರಭಾರಿ ಅಮೃತಾ ಧವನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಗೆ ಮುಂಚಿತವಾಗಿ ಜೈಪುರದ ವೈಶಾಲಿ ನಗರ ಪ್ರದೇಶದಲ್ಲಿ ಸಭೆಯನ್ನು ನಿಗದಿಪಡಿಸಲಾಗಿತ್ತು.

ಕ್ರಿಶ್ಚಿಯನ್ ಗಂಜ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಕರಣ್ ಸಿಂಗ್ ಪ್ರಕಾರ, ಆಸನ ವ್ಯವಸ್ಥೆಗೆ ಸಂಬಂಧಿಸಿದಂತೆ ಉಭಯ ನಾಯಕರ ಬೆಂಬಲಿಗರು ವಾಗ್ವಾದ ನಡೆಸಿದರು, ಇದು ಗಲಾಟೆಗೆ ಕಾರಣವಾಯಿತು.

ಇದೊಂದು ಪದಾಧಿಕಾರಿಗಳ ಸಭೆಯಾಗಿದ್ದು, ಅಜ್ಮೀರ್ ಸರಸ್ ಡೈರಿ ಅಧ್ಯಕ್ಷ ರಾಮಚಂದ್ರ ಚೌಧರಿ ಮತ್ತು ಆರ್‌ಟಿಡಿಸಿ ಅಧ್ಯಕ್ಷ ಧರ್ಮೇಂದ್ರ ರಾಥೋಡ್ ಅವರ ಬೆಂಬಲಿಗರು ಪರಸ್ಪರರ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಇದು ಮಾತಿನ ಚಕಮಕಿಗೆ ಕಾರಣವಾಯಿತು ಎಂದು ಕಾಂಗ್ರೆಸ್ ನಗರ ಅಧ್ಯಕ್ಷ ವಿಜಯ್ ಜೈನ್ ಹೇಳಿದರು. 

ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು ಎಂದು ಎಸ್‌ಎಚ್‌ಒ ಕರಣ್ ಸಿಂಗ್ ಹೇಳಿದ್ದಾರೆ. ಯಾವುದೇ ದೊಡ್ಡ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಹಿಂದಿನ ಭಾರತೀಯ ಜನತಾ ಪಕ್ಷ ನಡೆಸಿದ ಭ್ರಷ್ಟಾಚಾರದ ಬಗ್ಗೆ ಈಗಿನ ಸರ್ಕಾರ ತನಿಖೆಗೆ ಆದೇಶಿಸುತ್ತಿಲ್ಲ ಎಂಬುದು ಪೈಲಟ್ ಗೆಹ್ಲೋಟ್ ವಿರುದ್ಧದ ಮಾಡಿರುವ ಗಂಭೀರ ಆರೋಪವಾಗಿದ್ದು, ಭಿನ್ನಾಭಿಪ್ರಾಯಕ್ಕೆ ಮೂಲ ಕಾರಣವಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com