ಶ್ರೀನಗರ: ಜಮ್ಮು- ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೆ ಪಾಕಿಸ್ತಾನದಿಂದ ಒಳನುಸುಳುಕೋರನನ್ನು ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನುಸುಳುಕೋರನು ಗಡಿಯಾಚೆಯಿಂದ ಈ ಭಾಗಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದಾಗ ಮೆಂಧಾರ್ ಉಪ ವಿಭಾಗದ ಬಾಲಾಕೋಟ್ ಸೆಕ್ಟರ್‌ನಲ್ಲಿ ಕಾವಲು ಕಾಯುತ್ತಿದ್ದ ಪಡೆಗಳಿಂದ ಹೊಡೆದುರುಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಳನುಗ್ಗುವವನಿಗೆ ಅಧಿಕಾರಿಗಳು ಎಚ್ಚರಿಸಿದರೂ ಗಮನ ನೀಡಲಿಲ್ಲ. ಆಗ ಭದ್ರತಾ ಪಡೆ ಯೋಧರು ಗುಂಡು ಹಾರಿಸಿದಾಗ ಹಿಂತಿರುಗಲು ಪಲಾಯನ ಮಾಡಲು ಪ್ರಯತ್ನಿಸುತ್ತಿರುವಾಗ ಗುಂಡೇಟಿಗೆ ಸಿಲುಕಿ ಮೃತಪಟ್ಟಿದ್ದಾನೆ.
ಘಟನೆ ನಡೆದ ಸ್ಥಳದಲ್ಲಿ ಪ್ರದೇಶವನ್ನು ಸುತ್ತುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement